nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!

    August 8, 2026

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    • ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಸೀಕೆರೆ ಸಹಸ್ರಕೂಟ ಜಿನಾಲಯ ಅಭಿವೃದ್ಧಿಗೆ ಶ್ರವಣಬೆಳಗೊಳ ಭಟ್ಟರಕ ಶ್ರೀಗಳ ಸಂಕಲ್ಪ
    ಜಿಲ್ಲಾ ಸುದ್ದಿ December 27, 2024

    ಅರಸೀಕೆರೆ ಸಹಸ್ರಕೂಟ ಜಿನಾಲಯ ಅಭಿವೃದ್ಧಿಗೆ ಶ್ರವಣಬೆಳಗೊಳ ಭಟ್ಟರಕ ಶ್ರೀಗಳ ಸಂಕಲ್ಪ

    By adminDecember 27, 2024No Comments2 Mins Read
    arasikere

    ಅರಸೀಕೆರೆ:  ಇಲ್ಲಿನ ಸಹಸ್ರಕೂಟ ಜಿನಾಲಯ ದೇಶದಲ್ಲಿ ವಿಶಿಷ್ಟವಾಗಿದ್ದು , ಉತ್ತರ ಭಾರತ ಹಾಗೂ ಉತ್ತರ ಕರ್ನಾಟಕದವರು ಶ್ರೀ ಕ್ಷೇತ್ರ ಶ್ರವಣಬೆಳಗೊಳ ಸಂದರ್ಶಿಸಲು ಅರಸೀಕೆರೆ ಹೆಬ್ಬಾಗಿಲಾಗಿದ್ದು ,ಈ ಮೂಲಕ ಭಟ್ಟರಕರು, ಮುನಿಗಳು ,ಯಾತ್ರಾತ್ರಿಗಳು, ಮಾತಾಜಿ ಗಳು, ಕಾಲ್ನಡಿಗೆ ಯಲ್ಲಿ ಸಂಚರಿಸಬೇಕಿದೆ ,ಈ ಜಿನಾಲಯವನ್ನು ಅಭಿವೃದ್ಧಿಪಡಿಸಿ ತ್ಯಾಗಿ ಭವನ, ಆಹಾರ ತಯಾರಿಕ ಭವನಗಳೊಂದಿಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರುಕೀರ್ತಿ ಭಟ್ಟರಕ ಪಟ್ಟಾಚಾರ್ಯ ಶ್ರೀಗಳು ತಿಳಿಸಿದರು.

    ಅವರು ಶ್ರವಣಬೆಳಗೊಳ ದಿಂದ ಬೆಳಗಾವಿಗೆ ತೆರಳುವ ಮಾರ್ಗ ಮಧ್ಯೆ ನಗರದ   ಸಹಸ್ರಕೂಟ ಜಿನಾ ಲಯಕ್ಕೆಭೇಟಿ ನೀಡಿ ,ಬಸದಿ ದರ್ಶನ ಪಡೆದು ಭಕ್ತರನ್ನು ಆಶೀರ್ವದಿಸಿ ಮಾತನಾಡಿದರು.

    ಈ ಬಸದಿಗೆ ಶ್ರವಣಬೆಳಗೊಳ ಮಠವು ಎಲ್ಲಾ ರೀತಿಯ ಜವಾಬ್ದಾರಿ ತೆಗೆದುಕೊಂಡು ಒಂದು ಶ್ರದ್ಧಾ ಕೇಂದ್ರವನ್ನಾಗಿ ಮಾಡಲಾಗುವುದು ಎಂದ ಭಟ್ಟರಕ್ಕ ಶ್ರೀಗಳು , ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಸಂತಸ ತಂದಿದೆ, ಜಿಲ್ಲೆಯಲ್ಲಿರುವ ವಿವಿಧ ಜಿನಮಂದಿರಗಳೊಂದಿಗೆ ಒಂದು ಸಾವಿರ ವರ್ಷಗಳಿಗೂ ಹೆಚ್ಚು ವರ್ಷಗಳ ಇತಿಹಾಸವಿರುವ ಈ ಬಸದಿ, ಶ್ರವಣಬೆಳಗೊಳದ ಮಠದ ವ್ಯಾಪ್ತಿಗೆ ಸೇರುತ್ತದೆ .ಈ ಜಿನಾಲಯ ದ ಅಭಿವೃದ್ಧಿಯ ಕನಸು ಹಿರಿಯ ಭಟ್ಟಾರಕ ರಾದ ಕರ್ಮ ಯೋಗಿ ಶ್ರೀ ಸ್ವಸ್ತಿ ಶ್ರೀ ಚಾರುಕೀರ್ತಿ  ಭಟ್ಟಾರಕ ಶ್ರೀಗಳ  ಆಶಯವಾಗಿದ್ದು ಇದಕ್ಕೆ ಸ್ಥಳೀಯರು ಹಾಗೂ ಮಾಧ್ಯಮಗಳ ಸಹಕಾರ ಅಗತ್ಯ ಬಸದಿಯನ್ನು ಮುಂದಿನ ದಿನಗಳಲ್ಲಿ ವಿಶ್ವಕ್ಕೆ ಪರಿಚಯಿಸಲಾಗುವುದು ಎಂದರು.

    ಸಹಸ್ರಕೂಟ ಜಿನಾಲಯ ದ ಅಧ್ಯಕ್ಷ ಶಾಂತರಾಜು ಮಾತನಾಡಿ ಇಲ್ಲಿ ನಿತ್ಯ ನಿರಂತರವಾಗಿ ಪೂಜೆ  ಕೈಂಕರ್ಯ ಗಳು ನಡೆಯುತ್ತಿದ್ದು, ಭಟ್ಟರಕ ಶ್ರೀಗಳ ಭೇಟಿ  ಸಂತಸ ತಂದಿದೆ, ದೇಶದಲ್ಲಿ ಎರಡು ಕಡೆ ಮಾತ್ರ ಸಹಸಕೂಟ ಜಿನಾಲಯವಿದ್ದು ಈ ಪೈಕಿ ಅರಸೀಕೆರೆ ಸಹಸ್ರಕೂಟ ಜಿನಾಲಯವು ಜಿನಾಲಯ ಒಂದಾಗಿದೆ ಎಂದರು.

    ಮಹಿಳೆಯರು ಪೂರ್ಣ ಕುಂಭ ಕಳಸಗಳೊಂದಿಗೆ ಪೂಜ್ಯ ಭಟ್ಟರಕ ರಿಗೆ  ಸ್ವಾಗತ ನೀಡಿ, ಪಾದಪೂಜೆ ನೆರವೇರಿಸಿದರು.

    ಈ ವೇಳೆಯಲ್ಲಿ ಜಿನಾಲಯ ಸಮಿತಿಯ ಖಜಾಂಚಿ ರಾಜು, ಪದಾಧಿಕಾರಿಗಳಾದ ವಸುಪಾಲ್ ಜೈನ್ , ಬಾಹುಬಲಿ ದಂಡಾವತಿ, ಮೃತ್ಯುಂಜಯ, ಮುಕ್ತೇಶ್ ಅರ್ಚಕ ಅಕ್ಷಯ್ ಕುಮಾರ್, ನವರತನ್ ,  ಸೋಹನ್ ಲಾಲ್, ಬಿ.ವಿ .ಅಶೋಕ್, ಮೋಹನ್ ಲಾಲ್, ಚಕ್ರೇಶ್ವರಿ ಮಹಿಳಾ ಸಂಘದ ಸದಸ್ಯರು ಸೇರಿದಂತೆ ಶ್ರಾವಕ -ಶ್ರಾವಕಿಯರು ವಿವಿಧ ಜೈನ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಜೆ.ರಂಗನಾಥ, ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    ತುಮಕೂರು: ಬಾಲ್ಯ  ವ್ಯವಸ್ಥೆಯಲ್ಲಿ ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿಯನ್ನು ಹಾಕುತ್ತದೆ. ಪ್ರಾಥಮಿಕ ಹಂತದಲ್ಲಿ ಕಲಿತ ಕಲಿಕೆ ಅತ್ಯಂತ ಅಮೂಲ್ಯವಾದ…

    ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!

    August 8, 2026

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.