ತುರುವೇಕೆರೆ: ತಾಲೂಕಿನ ಬಾಣಸಂದ್ರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಶ್ರೀ ಮುತ್ತಿನ ಅಂಬೆ ದೇವಿಯ ಜಾತ್ರಾ ಮಹೋತ್ಸವವು ಏಪ್ರಿಲ್ 19ರಿಂದ 21ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಗುಡಿಗೌಡ ಚಂದ್ರೇಗೌಡ ಹೇಳಿದರು.
ತಾಲೂಕಿನ ಬಾಣಸಂದ್ರ ಗ್ರಾಮದಲ್ಲಿ ಪುರಾತನ ಕಾಲದಿಂದ ನಡೆಯುತ್ತಿರುವ ಶ್ರೀ ಮುತ್ತಿನ ಅಂಬೆ ಗ್ರಾಮದೇವತೆಯ ವಿಜೃಂಭಣೆ ಜಾತ್ರಾ ಮಹೋತ್ಸವದ ಕುರಿತು ಅವರು ಮಾಹಿತಿ ನೀಡಿದರು.
ಮಲ್ಲಘಟ್ಟ ಕೆರೆಯಲ್ಲಿ ದೇವತೆಗೆ ಪುಣ್ಯ ಸ್ನಾನ, ಗಿರೀಶ್ ಭಟ್ ವೇದಘೋಷಗಳ ಜೊತೆಗೆ ಊರ ಹಬ್ಬಕ್ಕೆ ಚಾಲನೆ ನೀಡಿದರು. ಗ್ರಾಮಸ್ಥರೆಲ್ಲರೂ ಒಗ್ಗೂಡಿ ಗ್ರಾಮದೇವತೆಯ ಹಬ್ಬವನ್ನು ಯಶಸ್ವಿಯಾಗಿ ನಡೆಸುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಊರಿನ ದೇವಸ್ಥಾನದ ವ್ಯವಸ್ಥಾಪಕರಾದ ರಂಗೇಗೌಡ ಬಿ.ಎಂ. ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು ಎಂ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy