ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ದೊಡ್ಡಹಳ್ಳಿ ಗ್ರಾಮದಲ್ಲಿ ಶ್ರೀ ವರದಾಂಜನೇಯಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ರಥೋತ್ಸವದ ಹಿನ್ನೆಲೆ ದೇವಾಲಯದಲ್ಲಿ ಗಣಪತಿ ಪೂಜೆ, ಪಂಚಾಮೃತ ಅಭಿಷೇಕ, ನವಗ್ರಹ ಪೂಜೆ, ಹೋಮ, ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಗಾರುಡಿ ಗೊಂಬೆ ಕುಣಿತ ಮತ್ತು ಮಹಿಳೆಯರು ಪೂರ್ಣ ಕುಂಭ ಕಳಶ ಒತ್ತು ಮೆರವಣಿಗೆಯಲ್ಲಿ ಸಾಗಿದರು. ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.
ಇದೇ ವೇಳೆ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಸಹಕರಿಸಿದ ವ್ಯಕ್ತಿಗಳಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ ಭಾನುವಾರ ಜಾರುಮರ ಜಾತ್ರೆ ನಡೆಯಲಿದೆ
ಈ ಸಂದರ್ಭದಲ್ಲಿನಿವೃತ್ತ ಜಿಲ್ಲಾಧಿಕಾರಿ ಹೆಚ್.ರಾಮಾಂಜನೇಯ, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಶೇಖರ್, ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿ ರಘುನಂದನ್, ಶ್ರೀ ವರದಾಂಜನೇಯಸ್ವಾಮಿ ಸೇವಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1