ತುಮಕೂರು: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮೂರು ಕಡೆಯ ಫಾಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ತುಮಕೂರು ತಾಲ್ಲೋಕಿನ ಕೌತಮಾರನಹಳ್ಳಿ, ಕಟ್ಟಿಗೆ ಗೊಲ್ಲಹಳ್ಳಿ ಹಾಗೂ ಮಧುಗಿರಿ ತಾಲ್ಲೂನ ಪುರವರ ಬಳಿಯಿರುವ ಎ.ಜಿ.ಒ. ಫಾರ್ಮ್ ಹೌಸ್ ಮೇಲೆ ಮೇಲೆ ದಾಳಿ ನಡೆಸಿದ ಎ.ಸಿ.ಬಿ. ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲಿಸಿ ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀನಿವಾಸ್ ಎಂಬುವವರ ಮನೆಗಳಮೇಲೆ ದಾಳಿ ನಡೆದಿದ್ದು, ದಾಳಿಯ ವೇಳೆ ಎ.ಸಿ.ಬಿ.ಯ ಹದಿನಾರು ಮಂದಿ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.
ಬುಧವಾರ ಬೆಳಿಗ್ಗೆ 7 ಗಂಟೆಯಿಂದ ದಾಳಿ ಪ್ರಾರಂಭವಾಗಿದ್ದು ಏಕ ಕಾಲದಲ್ಲಿ ಶ್ರೀನಿವಾಸ್ ರವರಿಗೆ ಸೇರಿರುವ ಮನೆಗಳು ಹಾಗೂ ಫಾರಗಮ್ ಹೌಸ್ ನ ಮೇಲೆ ದಾಳಿ ನಡೆದು ದಾಖಲೆಗಳ ಪರಿಶೀಲನೆ ನಡೆಯಿತು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB