ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾ ನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಮೇ 4ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ‘ಶ್ರೀ ಭಗೀರಥ ಜಯಂತಿ’ ಕಾರ್ಯಕ್ರಮವನ್ನು ಆಚರಿಸಲಾಗುವುದು.
ಶ್ರೀ ಭಗೀರಥ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು. ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿ, ವಿವಿಧ ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW