nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ: ಅರ್ಚಕರಿಗೂ ವೇತನ ನಿಗದಿ:  ಸಿ.ಟಿ.ರವಿ ಹೇಳಿದ್ದೇನು?
    ಜಿಲ್ಲಾ ಸುದ್ದಿ July 26, 2024

    ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ: ಅರ್ಚಕರಿಗೂ ವೇತನ ನಿಗದಿ:  ಸಿ.ಟಿ.ರವಿ ಹೇಳಿದ್ದೇನು?

    By adminJuly 26, 2024No Comments2 Mins Read
    c t ravi

    ಪ್ರಸಿದ್ಧ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನೇಮಕಗೊಂಡಿರುವ ಅರ್ಚಕರಿಗೆ ನಿಯಮಾನುಸಾರ ಪರಿಶೀಲಿಸಿ ವೇತನ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಡಾ.ಸಿ.ಟಿ.ರವಿ ತಿಳಿಸಿದ್ದಾರೆ.

    ವಿಧಾನ ಪರಿಷತ್ತಿನ ಕಲಾಪದಲ್ಲಿ ನಡೆದ ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ತಾನು ಈ ವಿಷಯ ಪ್ರಸ್ತಾಪಿಸಿ ಗಮನ ಸೆಳೆದಾಗ, ಸಚಿವರು ಈ ಬಗ್ಗೆ ಲಿಖಿತ ಉತ್ತರ ನೀಡಿದ್ದಾರೆ ಎಂದು ಗುರುವಾರ ಮಾಹಿತಿ ನೀಡಿದ್ದಾರೆ.


    Provided by
    Provided by

    ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಯು ಧಾರ್ಮಿಕ ದತ್ತಿ ಇಲಾಖೆಯ ‘ಎ’ ವರ್ಗದ ಸಂಯುಕ್ತ ಧಾರ್ಮಿಕ ಸಂಸ್ಥೆಯಾಗಿದ್ದು, ಹಲವು ಹೋರಾಟಗಳ ನಂತರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಏಪ್ರಿಲ್ ೧, ೨೦೨೩ ರಂದು ದೇವಾಲಯಕ್ಕೆ ಅರ್ಚಕರ ನೇಮಕ ಆದಾಗಿನಿಂದ ಇಂದಿನವರೆಗೆ ಅರ್ಚಕರಿಗೆ ವೇತನ ನಿಗದಿಪಡಿಸಿರುವುದಿಲ್ಲ.

    ಈ ಬಗ್ಗೆ ಹಿಂದಿನ ಅಧಿವೇಶನದಲ್ಲಿ ಈ ವಿಷಯವನ್ನು ತಾನೇ ಪ್ರಸ್ತಾಪಿಸಿದ್ದಾಗ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ಅರ್ಚಕರಿಗೆ ವೇತನ ನಿಗಧಿಪಡಿಸಲು ಕ್ರಮಕೈಗೊಳ್ಳಲಾಗುವುದೆಂದು ಇಲಾಖೆ ಸಚಿವರು ಲಿಖಿತ ಉತ್ತರದಲ್ಲಿ ಭರವಸೆ ನೀಡಿದ್ದರು. ಆದರೆ, ಇನ್ನೂ ಕಾರ್ಯಗತವಾಗಿಲ್ಲ ಎಂದು ತಾನು ಗಮನ ಸೆಳೆದಿದ್ದಾಗಿ ಹೇಳಿದ್ದಾರೆ.

    ಅರ್ಚಕರು ಆರತಿ ತಟ್ಟೆಯಲ್ಲಿ ಸಂಗ್ರಹವಾಗುತ್ತಿರುವ ಹಣವನ್ನು ಪಡೆಯುತ್ತಿರುವ ಕಾರಣ ಆರತಿ ತಟ್ಟೆಯ ಹಣದ ಜೊತೆಗೆ ವೇತನ ಶ್ರೇಣಿ ನೀಡಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾಗಳು ಸರ್ಕಾರಕ್ಕೆ ವರದಿ ನೀಡಿರುತ್ತಾರೆ. ಆದರೆ, ಈ ಹಿಂದೆ ನೇಮಕವಾಗಿರುವ ಮುಜಾವರ್‌ ಗಳು ತಟ್ಟೆ ಕಾಸು ಪಡೆಯುತ್ತಿದ್ದರೂ ಅವರಿಗೆ ವೇತನ ನಿಗದಿಪಡಿಸಿ ಪ್ರತಿ ತಿಂಗಳು ಪಾವತಿ ಮಾಡಲಾಗುತ್ತಿದೆ.

    ಆದರೆ, ಅರ್ಚಕರಿಗೆ ಮಾತ್ರ ವೇತನ ನೀಡದಿರುವುದು ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎನ್ನುವ ರೀತಿ ಆಗಿದೆ. ಅರ್ಚಕರಿಗೂ ವೇತನ ನಿಗದಿಸಿ ಪ್ರತಿ ತಿಂಗಳು ಪಾವತಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತಾನು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸಚಿವರು ಈ ಲಿಖಿತ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.

    ದೇವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ನಿಯಮ ೨೦೦೨ ರ ನಿಯಮ ೮(೨) (೧) ರನ್ವಯ ಅರ್ಚಕರು ತಟ್ಟೆ, ಕಾಸು ರೊಕ್ಕ ವೆಚ್ಚ ಮತ್ತು ಸೇವಾ ಕಮಿಷನ್ ಪಡೆಯಲು ನಿರಾಕರಿಸಿದ್ದಲ್ಲಿ ಅವರಿಗೆ ವೇತನವನ್ನು ವ್ಯವಸ್ಥಪನಾ ಸಮಿತಿ ನೇಮಿಸಲಾದ ಪ್ರಾಧಿಕಾರದಿಂದ ಅನುಮೋದನೆಗೆ ಒಳಪಟ್ಟು ಅವರು ಸ್ವೀಕರಿಸುವ ತಟ್ಟೆ ಕಾಸು ಮತ್ತು ಸೇವಾ ರುಸುಂ ಅನ್ನು ಗಮನದಲ್ಲಿರಿಸಿಕೊಂಡು ನಿಗಧಿಪಡಿಸಲು ಅವಕಾಶ ಇರುತ್ತದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ ಎಂದಿದ್ದಾರೆ.

    ಜೂನ್  ೨೭ ೨೦೨೪ ರಂದು ನಡೆದಿದ್ದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಈ ವಿಷಯ ಚರ್ಚಿಸಿ ಅರ್ಚಕರಿಗೆ ಮಾಸಿಕ ೯ ಸಾವಿರ ರೂ.ಗಳ ವೇತನ ನಿಗಧಿಪಡಿಸಲು ತೀರ್ಮಾನಿಸಿದ್ದು, ಅದರನ್ವಯ ಇಬ್ಬರು ಅರ್ಚಕರಿಗೆ ಮಾಸಿಕ ತಲಾ ೯ ಸಾವಿರ ರೂಪಾಯಿಗಳನ್ನು ನಿಗಧಿಪಡಿಸಿ ಸಂಸ್ಥೆಯ ನಿಧಿಯಿಂದ ಪಾವತಿಸಲು ಅನುಮತಿ ಕೋರಿದ್ದರ ಅನ್ವಯ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಅರ್ಚಕರಿಗೆ ತಲಾ ೯ ಸಾವಿರ ರೂ.ಗಳ ವೇತನ/ಸಂಭಾವನೆ ನಿಗಧಿಪಡಿಸಿ ಸಂಸ್ಥೆಯ ನಿಧಿಯಿಂದ ಪಾವತಿಸಲು ಅನುಮತಿ ನೀಡಲಾಗಿದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.