ತುಮಕೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಭಸ್ಮವಾದ 10 ಗುಡಿಸಲುಗಳಿಗೆ ಎಲೆರಾಮಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದರು.
ಗುಡಿಸಲಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ 10 ಗುಡಿಸಲು ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿಯಲ್ಲಿ ನಡೆದಿತ್ತು.
ಅದೃಷ್ಟವಶಾತ್ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಗುಡಿಸಲಿನಲ್ಲಿದ್ದ ದಿನಸಿ, ಬಟ್ಟೆ, ಇತರ ವಸ್ತುಗಳು ಭಸ್ಮವಾಗಿದೆ.
ಗುಡಿಸಲಿನಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಿ ಕೊಡಲು ಸಚಿವ ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಅವರು ಇದೇ ವೇಳೆ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA