ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವವು ಏಪ್ರಿಲ್ ಒಂದರಂದು ಸಿದ್ದಗಂಗಾ ಮಠದ ಆವರಣದಲ್ಲಿ ನಡೆಯಲಿದ್ದು ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವ ಹಿನ್ನೆಲೆಯಲ್ಲಿ ಯಾವುದೇ ರಾಜಕಾರಣಿಗಳಿಗೆ ವೇದಿಕೆ ಮೇಲೆ ಮಾತನಾಡಲು ಅವಕಾಶವಿರುವುದಿಲ್ಲ, ಬದಲಾಗಿ ಅವರು ಗದ್ದುಗೆ ದರ್ಶನ ಮಾಡಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಂತೆ ಭಾಗವಹಿಸಬಹುದು ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.
ಇಂದು ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮವನ್ನು ಪತಂಜಲಿ ಯೋಗ ಪೀಠದ ರಾಮದೇವ್ ಜಿ ಉದ್ಘಾಟಿಸಲಿದ್ದಾರೆ. ಮೈಸೂರಿನ ಶ್ರೀ ಸುತ್ತೂರು ವೀರ ಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ವಹಿಸುವರು ಕಾರ್ಯಕ್ರಮದಲ್ಲಿ ಮುಂಡರಗಿ ಅನ್ನದಾನೇಶ್ವರ ಮಹಾ ಸಂಸ್ಥಾನದ ಶ್ರೀ ಅನ್ನದಾನೇಶ್ವರ ಮಹಾಸ್ವಾಮಿಜಿ ಧಾರವಾಡದ ಮುರುಗಮಠ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಮಹಾ ಸ್ವಾಮೀಜಿ. ಗದಗದ ಶ್ರೀ ವೀರೇಶ್ವರ ಪುಣ್ಯಶ್ರಮದ ಅಧ್ಯಕ್ಷರಾದ ಕಲ್ಲಯ್ಯ ಅಜ್ಜ ನವರು, ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿರುವ ಶ್ರೀ ಶಿವಸಿದ್ದೇಶ್ವರ ಮಹಾಸ್ವಾಮಿಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.
ಏಪ್ರಿಲ್ ಒಂದರಂದು ನಡೆಯಲಿರುವ ಗುರುವಂದನ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷ ಭಕ್ತರು ಮಠಕ್ಕೆ ಭೇಟಿ ನೀಡುವ ಸಾಧ್ಯತೆಗಳಿದ್ದು ಎಲ್ಲರಿಗೂ ಪೂರಕವಾಗಿ ನಿರಂತರವಾಗಿ ಅನ್ನದಾಸೋಹದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು
ಪರಮಪೂಜ್ಯ ಶ್ರೀ ಶಿವಕುಮಾರ ಶಿವಯೋಗಿಗಳವರ 117ನೇ ಜಯಂತಿಯ ಹಾಗು ಗುರುವಂದನಾ ಸಮಾರಂಭಕ್ಕೆ ಸರ್ವ ಸದ್ಭಕ್ತರೂ ಸಕಾಲಕ್ಕೆ ದಯಮಾಡಿಸಿ ಗುರುಕೃಪೆಗೆ ಪಾತ್ರರಾಗಬೇಕೆಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳವರು ನುಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296