ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜನವರಿ 14ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಗುವುದು. ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು/ಸಿಬ್ಬಂದಿ ವರ್ಗ, ವಿವಿಧ ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx