ನಟಿ ಶ್ರುತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿರುವ ಮೀಟೂ ಕೇಸ್ ಸಂಬಂಧ ಜನವರಿ 2022ರಂದು ಕಬ್ಬನ್ ಪಾರ್ಕ್ ಪೊಲೀಸರು ಸೂಕ್ತ ಸಾಕ್ಷಿಗಳಿಲ್ಲ ಎಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಈ ರಿಪೋರ್ಟ್ ವಿರುದ್ಧ ಶ್ರುತಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ.
ಶ್ರುತಿ ಹರಿಹರನ್ ಅವರಿಗೆ ವಿಸ್ಮಯ ಚಿತ್ರದ ಶೂಟಿಂಗ್ ವೇಳೆ ನಟ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮೀಟೂ ವೇದಿಕೆಯಲ್ಲಿ ಅವರು ಹೇಳಿಕೊಂಡಿದ್ದರು.
ಶ್ರುತಿ ಅವರ ಮಾಡಿರುವ ಆರೋಪದ ಬಗ್ಗೆ ಕೆಲ ಸಂಘಟನೆಗಳು ಹಾಗೂ ಕಲಾವಿದರು ವಿರೋಧ ವ್ಯಕ್ತಪಡಿಸಿದ್ದರೆ, ಇನ್ನು ಸಾಕಷ್ಟು ಸಂಖ್ಯೆಯ ಹೋರಾಟಗಾರರು, ಕಲಾವಿದರು ಶ್ರುತಿ ಪರವಾಗಿ ಬೆಂಬಲ ವ್ಯಕ್ತಪಡಿಸಿದ್ದರು.
ಇದೀಗ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆಯ ಬಳಿಕ ಕಬ್ಬನ್ ಪಾರ್ಕ್ ಪೊಲೀಸರು ಘಟನೆಯ ಬಗ್ಗೆ ಸಾಕ್ಷ್ಯ ನೀಡುವಂತೆ ಶ್ರುತಿ ಹರಿಹರನ್ ಅವರಿಗೆ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


