ಬೆಂಗಳೂರು: ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಗೋಪಾಲಕೃಷ್ಣ ಹಾಗೂ ಎಸ್.ಆರ್.ವಿಶ್ವನಾಥ್ ಬೆಂಬಲಿಗ ದೇವರಾಜ್ ಅಲಿಯಾಸ್ ಕುಳ್ಳದೇವರಾಜ್ ಇಬ್ಬರು ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸುತ್ತಿದ್ದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಿಸಿಬಿ ಅಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಗೋಪಾಲಕೃಷ್ಣ ಯಲಹಂಕ ವಿಧಾನಸಭಾ ಕ್ಷೇತ್ರದಿಂದ ವಿಶ್ವನಾಥ್ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700