nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026
    Facebook Twitter Instagram
    ಟ್ರೆಂಡಿಂಗ್
    • ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲೆಮಾರಿ ಸಮುದಾಯಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    ತುಮಕೂರು December 11, 2024

    ಅಲೆಮಾರಿ ಸಮುದಾಯಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    By adminDecember 11, 2024No Comments2 Mins Read
    alemari

    ತುಮಕೂರು: ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಅನೇಕ ಅಲೆಮಾರಿ ಸಮುದಾಯದವರು ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳಿಲ್ಲದೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಲೆಮಾರಿ ಸಮುದಾಯಗಳು ವಾಸಿಸುತ್ತಿರುವ ಗ್ರಾಮಗಳಿಗೆ ತೆರಳಿ ಜನರಲ್ಲಿ ಅರಿವು ಮೂಡಿಸಿ ಅಗತ್ಯ ದಾಖಲೆಗಳನ್ನು ಪಡೆಯುವಂತೆ ಮಾಡಬೇಕು ಎಂದು ಸೂಚಿಸಿದರು.

    ಪ್ರತಿ 3 ತಿಂಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಕುಂದು ಕೊರತೆ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.

    ಅಲೆಮಾರಿ ಸಮುದಾಯದವರಿಗೆ ವಿಶೇಷ ವಸತಿ ಯೋಜನೆಯಡಿ ನಿವೇಶನ ಸೌಲಭ್ಯಕ್ಕಾಗಿ 3.50 ಲಕ್ಷ ರೂ.ಗಳ ಸಹಾಯಧನ ನಿಗದಿಪಡಿಸಲಾಗಿದ್ದರೂ ಸಹ ರಾಜೀವ್ ಗಾಂಧಿ ವಸತಿ ನಿಗಮವು ಕೇವಲ 2 ಲಕ್ಷ ರೂ.ಗಳನ್ನು ನೀಡುತ್ತಿದ್ದು ಮನೆ ನಿರ್ಮಿಸಿಕೊಳ್ಳಲು ಹೆಚ್ಚಿನ ಅನುದಾನ ನೀಡಬೇಕು ಎಂದು ನಿರ್ದೇಶಿಸಿದರು.

    ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯಗಳಿಗೆ ನಿವೇಶನ ನೀಡಿರುವ ಪ್ರದೇಶಗಳಲ್ಲಿ ಕಲ್ಲು ಬಂಡೆಗಳಿದ್ದು, ಜನರು ವಾಸಿಸಲು ಯೋಗ್ಯವಾಗಿಲ್ಲ. ಉತ್ತಮ ನಿವೇಶನವನ್ನು ನೀಡಬೇಕು ಎಂದು ಸಮುದಾಯದ ಮುಖಂಡರು ಸಭೆಗೆ ಬೇಡಿಕೆಯಿಟ್ಟರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯ ಅಲೆಮಾರಿ ಸಮುದಾಯಗಳು ವಾಸಿಸುತ್ತಿರುವ ಪ್ರದೇಶಗಳು ಮಜಿರೆ ಗ್ರಾಮಗಳಾಗಿದ್ದು ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ನಿವೇಶನಗಳ ಸಮಸ್ಯೆ ಉಂಟಾಗುತ್ತಿದೆ. ಮಜಿರೆ ಗ್ರಾಮಗಳನ್ನು ಶೀಘ್ರವಾಗಿ ಕಂದಾಯ ಗ್ರಾಮಗಳನ್ನಾಗಿಸಿ ನಿವೇಶನ ಹಂಚಿಕೆ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿಯಿಂದ ಒದಗಿಸುವ ಸೌಲಭ್ಯಗಳಲ್ಲಿ ಅಲೆಮಾರಿ ಸಮುದಾಯಗಳ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್ ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಆಳಿಸಲು ಜಿಲ್ಲಾ ಮಟ್ಟದಲ್ಲಿ ಕುಂದು ಕೊರತೆ ಸಭೆ ನಡೆಸುತ್ತಿರುವುದು ಅಲೆಮಾರಿ ಸಮುದಾಯಗಳ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿದೆ. ಅಧಿಕಾರಿಗಳು ಮತ್ತು ಅಲೆಮಾರಿ ಸಮುದಾಯಗಳು ಸಮನ್ವತೆ ಕಾಯ್ದುಕೊಂಡಾಗ ಅಲೆಮಾರಿ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ. ಕುಂದು ಕೊರತೆ ಸಭೆಗಳಲ್ಲಿ ವೈಯಕ್ತಿಕ ಸಮಸ್ಯೆಗಳಿಗಿಂತ ಸಮುದಾಯ ಕೇಂದ್ರಿತ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಮುದಾಯದ ಮುಖಂಡರಿಗೆ ಮನವರಿಕೆ ಮಾಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಉಪ ವಿಭಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ, ಗೋಟೂರು ಶಿವಪ್ಪ ಸೇರಿದಂತೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಅಲೆಮಾರಿ ಸಮುದಾಯಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    ಬೆಂಗಳೂರು: ತಮ್ಮನ್ನು ಸ್ಟಿಂಗ್ ಆಪರೇಷನ್ ಮೂಲಕ ಬಲೆಗೆ ಬೀಳಿಸಲು ಕೆಲವರು ಪ್ರಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ…

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.