nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ಪತ್ರೆ ಗೋಡೌನ್ ನಲ್ಲಿ ಕೊಳೆಯುತ್ತಿರುವ ‘ಶುಚಿ’ ಸ್ಯಾನಿಟರಿ ಪ್ಯಾಡ್!
    ಕೊರಟಗೆರೆ May 17, 2022

    ಆಸ್ಪತ್ರೆ ಗೋಡೌನ್ ನಲ್ಲಿ ಕೊಳೆಯುತ್ತಿರುವ ‘ಶುಚಿ’ ಸ್ಯಾನಿಟರಿ ಪ್ಯಾಡ್!

    By adminMay 17, 2022No Comments2 Mins Read
    shuchi

    ಕೊರಟಗೆರೆ: ಸರ್ಕಾರದಿಂದ ಶಾಲಾ ಕಾಲೇಜುಗಳ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗಲೆಂದು ಸ್ಯಾನಿಟರಿ ಪ್ಯಾಡ್ ಗಳ ಉಚಿತ ವಿತರಣೆ ಮಾಡಲಾಗಿದ್ದರೆ, ಇತ್ತ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚಿಕೆ ಮಾಡದೇ ಗೋಡಾನ್ ನಲ್ಲಿ ಕೊಳೆಯಲು ಹಾಕಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

    ಕೊರಟಗೆರೆ ತಾಲೂಕಿನ ವೈದ್ಯಾಧಿಕಾರಿ ವಿಜಯ್ ಕುಮಾರ್ ಅವರ ನಿರ್ಲಕ್ಷ್ಯದಿಂದಾಗಿ ಬಡ ಹೆಣ್ಣುಮಕ್ಕಳಿಗೆ ಸೇರಬೇಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳು ಆಸ್ಪತ್ರೆ ವಠಾರದಲ್ಲಿರುವ ಗೋಡಾನ್ ನಲ್ಲಿ ಕೊಳೆಯುತ್ತಿವೆ ಎನ್ನುವ ಆರೋಪ ಕೇಳಿ ಬಂದಿದೆ.


    Provided by
    Provided by

    ಸರ್ಕಾರದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ, ಬಡ ಹೆಣ್ಣು ಮಕ್ಕಳಿಗೆ ಈ ಕೊಡುಗೆ ನೀಡಿದೆ. ಆದರೆ, ಇದು ಫಲಾನುಭವಿಗಳಿಗೆ ದೊರಕದೇ ಈ ರೀತಿಯಾಗಿ ಗೋಡಾನ್ ನಲ್ಲಿ ಕೊಳೆಯುತ್ತಿರುವುದು ದುರದೃಷ್ಟಕರವಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರು ತಕ್ಷಣವೇ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

    ಪಾಳು ಬಿದ್ದಿರುವ ಸ್ಥಿತಿಯಲ್ಲಿರುವ ಗೋಡಾನ್ ನಲ್ಲಿ ಸ್ಯಾನಿಟರಿ ಪ್ಯಾಡ್ ಗಳು ಕಂಡು ಬಂದಿದ್ದು, “ಶುಚಿ” ಎಂದು ಬರೆಯಲಾಗಿರುವ ರಟ್ಟಿನ ಬಾಕ್ಸ್ ಗಳಲ್ಲಿ ಸರ್ಕಾರ ಉಚಿತವಾಗಿ ನೀಡುತ್ತಿರುವ ಸ್ಯಾನಿಟರಿ ಪ್ಯಾಡ್ ಗಳು ಕಂಡು ಬಂದಿವೆ. ಹೆಣ್ಣು ಮಕ್ಕಳಿಗೆ ವಿತರಿಸಬೇಕಾದ ಸ್ಯಾನಿಟರಿ ಪ್ಯಾಡ್ ಗಳು ಇಲ್ಲೇಕೆ ಕೊಳೆಯುತ್ತಿವೆ ಎನ್ನುವುದು ತಿಳಿದು ಬಂದಿಲ್ಲ. ಆದರೆ, ಇಷ್ಟೊಂದು ಪ್ರಮಾಣದಲ್ಲಿ ಸರ್ಕಾರಿ ಸವಲತ್ತುಗಳು ವ್ಯರ್ಥವಾಗುತ್ತಿವೆ. ಇದನ್ನು ಸಬ್ದಳಕೆ ಮಾಡಲು ಯಾಕೆ ಕ್ರಮಕೈಗೊಳ್ಳಲಾಗುತ್ತಿಲ್ಲ ಎನ್ನುವ  ಪ್ರಶ್ನೆಗಳಿಗೆ ಕಾರಣವಾಗಿದೆ.

    ಎಷ್ಟೋ ಬಡವರ ಮನೆಗಳಲ್ಲಿ ಹೆಣ್ಣು ಮಕ್ಕಳು ಸ್ಯಾನಿಟರಿ ಪ್ಯಾಡ್ ಇಲ್ಲದೇ ತಮ್ಮ ಮುಟ್ಟಿನ ಅವಧಿಯಲ್ಲಿ ಸಾಕಷ್ಟು ತೊಂದರೆಗೀಡಾಗುತ್ತಾರೆ. ಹಳ್ಳಿಗಳಲ್ಲಿ ಎಷ್ಟೋ ಮನೆಗಳಲ್ಲಿ ಇನ್ನು ಕೂಡ  ಸ್ಯಾನಿಟರಿ ಪ್ಯಾಡ್ ಕೊಳ್ಳಲು ಸಾಧ್ಯವಾಗದ ಹೆಣ್ಣು ಮಕ್ಕಳು ಎಷ್ಟೋ ಸಂಖ್ಯೆಯಲ್ಲಿದ್ದಾರೆ. ಇಂತಹವರಿಗೆ ಸದ್ಬಳಕೆಯಾಗಬೇಕಿರುವ ಸರ್ಕಾರದ ಸೌಲಭ್ಯಗಳು ಆಸ್ಪತ್ರೆಗಳ ಗೋಡೌನ್ ಗಳಲ್ಲಿ ಕೊಳೆಯುತ್ತಿರುವುದು ದುರದೃಷ್ಟಕರವಾಗಿದೆ.

    ಈ ಘಟನೆಯ ಬಗ್ಗೆ ತಕ್ಷಣವೇ ಸಂಬಂಧಪಟ್ಟವರು ಗಮನ ಹರಿಸಬೇಕು, ಮಾತ್ರವಲ್ಲದೇ ಇಡೀ ರಾಜ್ಯದಲ್ಲಿ ಈ ಸ್ಯಾನಿಟರಿ ಪ್ಯಾಡ್ ಗಳನ್ನು ವ್ಯರ್ಥ ಮಾಡುತ್ತಿರುವ ಘಟನೆಗಳ ಕುರಿತು ತನಿಖೆಗೆ ಸಂಬಂಧಪಟ್ಟವರು ಮುಂದಾಗಬೇಕು ಎನ್ನುವುದೇ ನಮ್ಮತುಮಕೂರು ಸದಾಶಯ.

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.