ಜಮ್ಮು ಕಾಶ್ಮೀರದ ಪಾಂಪೋರ್ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮೃತದೇಹ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದು ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.
ಮೃತ ಅಧಿಕಾರಿಯನ್ನು ಫಾರೂಖ್ ಅಹ್ಮದ್ ಮೀರ್ ಎಂದು ಗುರುತಿಸಲಾಗಿದ್ದು ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸಬ್-ಇನ್‌ಸ್ಪೆಕ್ಟರ್ (ಮಿನಿಸ್ಟೀರಿಯಲ್ ವಿಂಗ್) ಆಗಿದ್ದರು.
ಫಾರೂಖ್ ಅವರನ್ನು ಪಾಂಪೋರ್‌ನ ಸಂಬೂರ ಪ್ರದೇಶದಲ್ಲಿರುವ ಅವರ ನಿವಾಸದಿಂದ ಅಪಹರಿಸಿ ಹತ್ತಿರದ ಗದ್ದೆಯಲ್ಲಿ ಹತ್ಯೆಗೈಯ್ಯಲಾಗಿದೆ ಎಂದು ಶಂಕಿಸಲಾಗಿದೆ. ಅವರು ಶುಕ್ರವಾರ ಸಂಜೆ ತಮ್ಮ ಮನೆಯಿಂದ ತಮ್ಮ ಭತ್ತದ ಗದ್ದೆಗೆ ತೆರಳಿದ್ದರೆನ್ನಲಾಗಿದೆ. ಅಲ್ಲಿ ಈ ಘಟನೆ ನಡೆದಿದೆ. ಫಾರೂಖ್ ಅವರು ಜಮ್ಮು ಕಾಶ್ಮೀರದ ಐಆರ್‌ಪಿ ಬೆಟಾಲಿಯನ್ ನಲ್ಲಿ ನಿಯೋಜಿಸಲ್ಪಟ್ಟಿದ್ದರು. ಇನ್ನೂ, ಘಟನೆ ನಡೆದ ವೇಳೆ ಫಾರೂಖ್ ಅವರು ಕರ್ತವ್ಯದಲ್ಲಿರಲಿಲ್ಲ ಎಂದು ತಿಳಿದುಬಂದಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB