ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಹುಣಸನಹಳ್ಳಿ ಬಳಿ ನಡೆದಿದೆ.
ಮೃತವ್ಯಕ್ತಿಯನ್ನುಮುನಿರಾಜು(56) ಎಂದು ಗುರುತಿಸಲಾಗಿದೆ.ಮೃತ ಮುನಿರಾಜು ಕಳೆದ ಹಲವು ದಿನಗಳಿಂದ ಕಿಡ್ನಿ ವೈಪಲ್ಯವಾಗಿ ಡಯಾಲಸಿಸ್ ನಲ್ಲಿದ್ದರು. ಇತ್ತೀಚೆಗೆ ಅನಾರೋಗ್ಯ ತೀವ್ರವಾಗಿದ್ದು ಮನನೊಂದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈಲಿಗೆ ಸಿಲುಕಿದ ಪರಿಣಾಮ ದೇಹ ಎರಡು ತುಂಟಾಗಿದೆ. ಬಂಗಾರಪೇಟೆ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


