ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಟೀಕೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ತೀರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರು ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಹೇಳಿದ್ದಾರೆ.
ಪ್ರವೀಣ್ ಹತ್ಯೆಯನ್ನು ಖಂಡಿಸಿ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು.ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಕೊಲೆಗಳಾಗಿವೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಸಿಎಂ ಬೊಮ್ಮಾಯಿ ಅವರು ಸಿದ್ಧರಾಮಯ್ಯ ನವರ ಆಡಳಿತದ ಸಮಯದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಸಿಎಂ ಪ್ರಶ್ನಿಸಿದರು.
ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬ ಹೇಳಿಕೆ ಅತ್ಯಂತ ಹಾಸ್ಯಾಸ್ಪದವಾಗಿದೆ. ಇದು ಕಾಂಗ್ರೆಸ್‌ನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy