nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    • ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?
    • ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ
    ತುಮಕೂರು December 22, 2025

    ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ

    By adminDecember 22, 2025No Comments2 Mins Read

    ತುಮಕೂರು : ಶ್ರೀಮಠದ ಬೆಳವಣಿಗೆಯ ಪ್ರತಿ ಹಂತದಲ್ಲು ಶ್ರೀಗಳ ಶ್ರಮ ಇದೆ. ಮಠದ ಮಕ್ಕಳ ಶ್ರೇಯೋಭಿವೃದ್ಧಿ ಗಾಗಿ ಅವರ ಜೀವನವನ್ನೇ ಸಮರ್ಪಿಸಿಕೊಂಡಿದ್ದರು. ಶಿವಕುಮಾರ ಶ್ರೀಗಳ ಮೇಲಿನ ಭಕ್ತಿ, ಶ್ರದ್ಧೆ, ಅಭಿಮಾನ, ಪ್ರೀತಿಯಿಂದ ಹಳೆಯ ವಿದ್ಯಾರ್ಥಿಗಳು ಈ ಸಮಾವೇಶಕ್ಕೆ ನಾಡಿನೆಲ್ಲಡೆಯಿಂದ ಆಗಮಿಸಿದ್ದಾರೆ. ಇದೊಂದು ಕೃತಜ್ಞತಾ ಸಭೆ ಅಂದರೆ ತಪ್ಪಾಗಲಾರದು. ಶ್ರೀಮಠವು ಎಂದೂ ಏನನ್ನೂ ಬೇಡುವುದಿಲ್ಲ. ಸಂಘಕ್ಕೆ ಯಾವ ನಿಧಿಯು ಬೇಡ. ಹಳೆಯ ವಿದ್ಯಾರ್ಥಿಗಳೇ ನಮ್ಮ ಪಾಲಿನ ನಿಧಿ ಎಂದು ಸಿದ್ದಗಂಗಾ ಮಠಾಧ್ಯಕ್ಷ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು.

    ಸಿದ್ಧಗಂಗಾಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಮಾಡುವ “ಸಿದ್ಧಗಂಗಾಶ್ರೀ’ ‘ಸಂಘ ಸಿರಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಅವರು, ಪರಮಪೂಜ್ಯರಿಗೆ ಹಳೆಯ ವಿದ್ಯಾರ್ಥಿಗಳ ಕಂಡರೆ ಅಭಿಮಾನ, ಪ್ರೀತಿ ಇತ್ತು‌. ನಿಮ್ಮಲ್ಲಿ ಪೂಜ್ಯರನ್ನು ಕಂಡಷ್ಟು ಖುಷಿ ಯಾಗುತ್ತಿದೆ ಎಂದರು.


    Provided by
    Provided by

    ಶ್ರೀಮಠದ ಬೆಳವಣಿಗೆಯ ಪ್ರತಿ ಹಂತದಲ್ಲು ಶ್ರೀಗಳ ಶ್ರಮ ಇದೆ. ಮಠದ ಮಕ್ಕಳ ಶ್ರೇಯೋಭಿವೃದ್ಧಿ ಗಾಗಿ ಅವರ ಜೀವನವನ್ನೇ ಸಮರ್ಪಿಸಿಕೊಂಡಿದ್ದರು. ಶಿವಕುಮಾರ ಶ್ರೀಗಳ ಮೇಲಿನ ಭಕ್ತಿ, ಶ್ರದ್ಧೆ,ಅಭಿಮಾನ, ಪ್ರೀತಿಯಿಂದ ಹಳೆಯ ವಿದ್ಯಾರ್ಥಿಗಳು ಈ ಸಮಾವೇಶಕ್ಕೆ ನಾಡಿನೆಲ್ಲಡೆಯಿಂದ ಆಗಮಿಸಿದ್ದಾರೆ. ಇದೊಂದು ಕೃತಜ್ಞತಾ ಸಭೆ ಅಂದರೆ ತಪ್ಪಾಗಲಾರದು ಎಂದು ತಿಳಿಸಿದರು.

    ಮಕ್ಕಳಿಗೆ ಶಿಕ್ಷಣ ಕೊಡಬೇಕು ಎಂಬ ಗುರಿಹೊಂದಿದ್ದ ಶ್ರೀಗಳು, ಮಠದಲ್ಲಿ ಮಕ್ಕಳಿಗೆ ಅನ್ನ, ಆಶ್ರಯ, ಅಕ್ಷರ ದಾಸೋಹ ನೀಡಿದ್ದಲ್ಲದೆ ಗ್ರಾಮೀಣ ಭಾಗದಲ್ಲಿ ಗ್ರಾಮಾಂತರ ಶಾಲೆಗಳನ್ನು ತೆರೆದು ಅವರನ್ನು ಅಕ್ಷರಸ್ಥರನ್ನಾಗಿಸುವುದರ ಜತೆಗೆ ಸಂಸ್ಕಾರವನ್ನು ಕಲಿಸಿ ಉತ್ತಮ ಬದುಕು ರೂಪಿಸಿ ಕೊಳ್ಳಲು ಅವಕಾಶ ಕಲ್ಪಿಸಿದರು.ಶ್ರೀಗಳ ಆಶಯದಂತೆ ನಾವೆಲ್ಲಾ ಬದುಕೋಣ ಎಂದರು.

    ಹಳೆಯ ವಿದ್ಯಾರ್ಥಿಗಳು ವೈಯಕ್ತಿಕ ಬದುಕು, ವೃತ್ತಿ ಬದುಕಲ್ಲು ಪ್ರಾಮಾಣಿಕತೆ ತೋರಿ ಮಠದ ಕೀರ್ತಿಯನ್ನು ಬೆಳಗಿದ್ದೀರಾ. ಶ್ರೀಗಳ ಆಶೀರ್ವಾದ ಪಡೆದು ಬೆಳೆದಿರುವ ನೀವುಗಳ ಮಠಕ್ಕೆ ಬರುವುದೇ ನಮಗೆ ಪುಣ್ಯವೆಂದು ಭಾವಿಸಿದ್ದೀವಿ ಎಂದರು.

    ಸಿದ್ಧಗಂಗಾ ಶಿವಕುಮಾರ ಶ್ರೀ ಪ್ರಶಸ್ತಿ ಸ್ವೀಕರಿಸಿ ಮೈಸೂರಿನ ಡಾ.ಎಸ್.ಪಿ.ಉಮಾದೇವಿ ಹಾಗೂ ಹಿರಿಯ ತಜ್ಞವೈದ್ಯ ತುಮಕೂರಿನ ಡಾ.ಸಿ.ಶರತ್ ಕುಮಾರ್ ಮಾತನಾಡಿದರು.

    ಕೆಎಸ್ ಒಯು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಜಯವಿಭವ ಸ್ವಾಮಿ, ಸಂದ ಕಾರ್ಯದರ್ಶಿ ಕೆ.ಎಚ್. ಶಿವರುದ್ರಯ್ಯ, ಎಸ್.ಶಿವಕುಮಾರ್, ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.

    ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ನಿರ್ದೇಶಕರಾಗಿದ್ದ ಡಾ.ಎಂ.ಎನ್.ಚನ್ನಬಸಪ್ಪ ಅವರನ್ನು ಸಿದ್ದಗಂಗಾ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಶಿಕ್ಷಣ, ಆಡಳಿತ ಹಾಗೂ ಶ್ರೀಮಠಕ್ಕೆ ಸಲ್ಲಿಸಿದ ಜೀವಮಾನದ ಸಾಧನೆಯನ್ನು ಪರಿಗಣಿಸಿ ಚನ್ನಬಸಪ್ಪ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ನೀಡಲಾಯಿತು.

    ಎಂಎನ್ಸಿ ಪುತ್ರಿ ಶ್ರೀಮತಿ ಹೇಮ ಅವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು 1 ಲಕ್ಷ ರೂ., ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

    ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಮೈಸೂರಿನ ಡಾ.ಎಸ್.ಪಿ.ಉಮಾದೇವಿ ಹಾಗೂ ಹಿರಿಯ ತಜ್ಞವೈದ್ಯ ತುಮಕೂರಿನ ಡಾ.ಸಿ.ಶರತ್ ಕುಮಾರ್ಗೆ ಸಿದ್ಧಗಂಗಾ ಶಿವಕುಮಾರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ತಲಾ 25 ಸಾವಿರ ರೂ., ನಗದು, ಪ್ರಶಸ್ತಿಪತ್ರ, ಸ್ಮರಣಿಕೆ ಹೊಂದಿದೆ.

     ಸಂಘಸಿರಿ ಪ್ರಶಸ್ತಿ : ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಂದ ಹಳೆಯ ವಿದ್ಯಾರ್ಥಿಗಳಾದ ದುಗ್ಗಹಟ್ಟಿಯ ಪಿ.ವೀರಭದ್ರಪ್ಪ, ತುಮಕೂರಿನ ಎಚ್.ಬಿ.ನಂಜುಂಡಯ್ಯ, ಎಂ.ಎಸ್.ದಶರಥರಾಮಯ್ಯ, ಗೆದ್ದಲಗಟ್ಟೆ ಎಂ.ಸಿದ್ದಯ್ಯ, ಬೆಂಗಳೂರಿನ ಜಿ.ನಾಗಸುಂದರ್, ದಾವಣಗೆರೆ ಸಿ.ಕೆ.ಸಿದ್ದಪ್ಪ ಅವರಿಗೆ ಸಂಘಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ

    January 14, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ…

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.