ನೂತನ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಇಂದು ಸಿದ್ದರಬೆಟ್ಟಕ್ಕೆ ಭೇಟಿ ನೀಡಿದರು. ಇದೇ ವೇಳೆ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದವನ್ನು ಪಡೆದರು.
ರಾಜ್ಯ ಸರ್ಕಾರ ಯಾವುದೇ ಸ್ಥಾನ ಕೊಟ್ಟರೂ ಸರಿ, ರಾಜ್ಯದ ಬಡಜನರ ಹಾಗೂ ಕ್ಷೇತ್ರದ ಅಭಿವೃದ್ಧಿ ನನ್ನ ಗುರಿ ಎಂದ ಅವರು, ಭಕ್ತಾದಿಗಳ ಪ್ರಸಿದ್ಧ ತಾಣವಾಗಿರುವ ಸಿದ್ದರಬೆಟ್ಟ ಕ್ಷೇತ್ರಕ್ಕೆ ಹಾಗೂ ಕ್ಷೇತ್ರದ ವಿವಿಧ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಪರಮೇಶ್ವರ್ ಅವರನ್ನು ಗೌರವಿಸಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಸ್ವಾಮೀಜಿ, ರಾಜ್ಯದ ಅಭಿವೃದ್ಧಿ ಜೊತೆಗೆ ಕ್ಷೇತ್ರದಲ್ಲಿ ಪ್ರತಿ ಮನೆಯ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿದರೆ. ಅವರು ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಾರೆ ಎಂದು ಸಚಿವರಿಗೆ ಕಿವಿಮಾತು ಹೇಳಿದರು. ಇದಕ್ಕೆ ಉತ್ತರಿಸಿದ ಪರಮೇಶ್ವರ್, ಮುಂದಿನ ದಿನಗಳಲ್ಲಿ ಅವೆಲ್ಲವೂ ನೆರವೇರುತ್ತದೆ ಎಂದು ಭರವಸೆ ನೀಡಿದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy