ಬೆಂಗಳೂರು: ವಯನಾಡಿನಲ್ಲಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ಕರ್ನಾಟಕ ಸರ್ಕಾರ ನಿಂತಿದೆ. ಮಾನವೀಯ ನೆಲೆಯಲ್ಲಿ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಮನೆ ನಿರ್ಮಾಣ ಮಾಡಿಕೊಡಲಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಹೇಳಿದ್ದಾರೆ.
ವಯನಾಡಿನ ಚೂರಲ್ಮಾಲ, ಮುಂಡಕ್ಕೈ ಹಾಗೂ ಅಟ್ಟಮಾಲ ಊರುಗಳು ಗುರುತು ಸಿಗದಂತೆ ಅಳಿದು ಹೋಗಿದೆ. ಸಾವನ್ನಪ್ಪಿದವರಿಗಾಗಿ ಇನ್ನೂ ಹುಡುಕಾಟ ನಡೆಯುತ್ತಲೇ ಇದೆ. ರಕ್ಷಣಾ ಕಾರ್ಯಾಚರಣೆಯೂ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296