ನವದೆಹಲಿ: ಭ್ರಷ್ಟಾಚಾರದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದವರನ್ನು ಲೋಕಾಯುಕ್ತ ಎಡಿಜಿಪಿಯನ್ನಾಗಿ ನೇಮಿಸಿಕೊಂಡಿದ್ದಾರೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಭಯಭೀತರಾಗಿದ್ದಾರೆ. ಭಯದಿಂದಲೇ ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದವರಿಗೆ ಸನ್ಮಾನಿಸುತ್ತೇವೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನೀವೇ ದೊಡ್ಡ ಭ್ರಷ್ಟಾಚಾರಿಗಳು ನೀವು ಏನು ಮಾತನಾಡುತ್ತೀರಿ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರೇ 70 ಲಕ್ಷ ರೂಪಾಯಿ ಮೌಲ್ಯದ ವಾಚ್ ಏನಾಯ್ತು? ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಏನಾಯ್ತು? ನೀವೇ ಮಾಡಿದ ರೀಡೂ ವಿಷಯದಲ್ಲಿ ಕೆಂಪಣ್ಣ ವರದಿ ಏನಾಯಿತು? ಈಗ ಸಿಬಿಐ ಅಧಿಕಾರಿಗಳು ತನಿಖೆ ಮಾಡಲು ಬಾರದಂತೆ ಮಾಡಿದ್ದಾರೆ. ಲೋಕಾಯುಕ್ತ ತನಿಖೆ ಮಾಡಬೇಕು ಅಂದರೆ ಸಿಎಂ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296