ಸಂಸದ ಪ್ರತಾಪ್ ಸಿಂಹ ಸೋಲಿಸಿ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ ಸದಾ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯನವರಿಗೆ ಇಂತಹ ದಯನೀಯ ಸ್ಥಿತಿ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೆಲ್ಲವೂ ಉಲ್ಟಾ ಆಗುತ್ತದೆ ಎಂದು ಮೈಸೂರಿನಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಈ ಬಾರಿಯೂ ಪ್ರತಾಪಸಿಂಹ ಗೆಲ್ತಾರೆ, ಮೋದಿ ಪ್ರಧಾನಿಯಾಗ್ತಾರೆ. ಸಿಎಂ ಸಿದ್ದರಾಮಯ್ಯ ಸದಾ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


