ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆಗಸ್ಟ್ 27 ರ ಇಂದಿಗೆ 100 ದಿನದ ಸಂಭ್ರಮ, ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ.
ಅಧಿಕಾರಕ್ಕೆ ಬಂದ ಬಳಿಕ ಮೊದಲ ಗ್ಯಾರಂಟಿ ಯೋಜನೆಯಾದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. ರಾಜ್ಯಾದ್ಯಂತ ಶಕ್ತಿ ಯೋಜನೆ ಭರ್ಜರಿ ಯಶಸ್ವಿಯಾಗಿದೆ.
2 ನೇ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದು, ಈಗಾಗಲೇ ಸರಿಸುಮಾರು ಶೇ. 98 ರಷ್ಟು ಕುಟುಂಬಗಳಿಗೆ ಮಾಸಿಕ ಸರಾಸರಿ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. 3 ನೇ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿದೆ. ಆದರೆ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಬದಲು ಉಳಿದ 5 ಕೆಜಿ ಅಕ್ಕಿಯ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಿದೆ.
ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಮಹಿಳೆಯರು ಅರ್ಜಿ ಸಲ್ಲಿಸಿದ್ದು, ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ಆಗಸ್ಟ್ 30 ರಂದು ಯಜಮಾನಿಯರ ಖಾತೆಗೆ 2,000 ಹಣ ವರ್ಗಾವಣೆ ಮಾಡಲಾಗುತ್ತದೆ.


