ದೆಹಲಿ: ಸಿದ್ದರಾಮಯ್ಯನವರು ಪ್ರಾಮಾಣಿಕರಾಗಿದ್ದರೆ ಗ್ಯಾರಂಟಿ ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ವಿಷಯದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಅನರ್ಹರ ಕಾರ್ಡ್ ಬದಲಿಸಲು ಆಕ್ಷೇಪವಿಲ್ಲ, ಆದರೆ ರಾಜ್ಯ ಸರಕಾರವು ಸಮರ್ಪಕ ಮಾನದಂಡವೇ ಇಲ್ಲದೆ ಪ್ಯಾನ್ ಕಾರ್ಡ್, ಆದಾಯ ತೆರಿಗೆ ವಿಚಾರಗಳನ್ನು ಮುಂದಿಟ್ಟುಕೊಂಡು 10ರಿಂದ 20 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ವಜಾ ಮಾಡಿದೆ ಎಂದು ಟೀಕಿಸಿದರು.
ಬಿಪಿಎಲ್ ಕಾರ್ಡಿಗೆ ಕತ್ತರಿ ಹಾಕಿದರೆ, ಗೃಹಲಕ್ಷ್ಮಿ ಹಣ ಉಳಿತಾಯ ಉಳಿತಾಯ ಆಗುತ್ತದೆ. ಗೃಹಲಕ್ಷ್ಮೀ ಹಣ ಇವರಿಗೆ ಕೊಡಲು ಸಾಧ್ಯವಾಗುತ್ತಿಲ್ಲ. 5 ಕೆಜಿ ಅಕ್ಕಿಗೆ ಕೊಡುವ ಹಣವೂ ಉಳಿಯಲಿದೆ. ಸಾವಿರಾರು ಕೋಟಿ ರೂ. ಉಳಿತಾಯಕ್ಕಾಗಿ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಬಿಪಿಎಲ್ ಕಾರ್ಡ್ ರದ್ದು ಮಾಡಿ ವಂಚನೆ ಮಾಡುವ ಸರಕಾರ ಇದು. ಮನುಷ್ಯತ್ವ ಇರುವ ಸರಕಾರ ಬಡವರಿಗೆ ಬರೆ ಎಳೆಯಲು ಮುಂದಾಗುತ್ತಿರಲಿಲ್ಲ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296