ಶಿವಮೊಗ್ಗ: ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿಯ ನಾಯಕರ ಬಗ್ಗೆ ಅವಹೇಳನಕಾರಿ ಮಾತುಗಳಾಡುವುದನ್ನೇ ಸಿದ್ದರಾಮಯ್ಯ ವೃತ್ತಿಯಾಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗುವ ಅವಕಾಶವನ್ನು ಸಿದ್ಧರಾಮಯ್ಯ ತಪ್ಪಿಸಿದರು. ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದು ಬ್ಲ್ಯಾಕ್ ಮೇಲ್ ಮಾಡಿ ಮುಖ್ಯಮಂತ್ರಿಯಾದರು. ಅವರೊಬ್ಬ ಕಪಟ ರಾಜಕಾರಣಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
2006 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕೇವಲ 257 ಮತಗಳ ಅಂತರದಲ್ಲಿ ಗೆಲುವು ಕಂಡರು. ಕಾಂಗ್ರೆಸ್ ಪಕ್ಷದ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಮಹಾದೇವಪ್ಪ ಇಲ್ಲದಿದ್ದರೆ ಅಂದೇ ರಾಜಕೀಯದಿಂದ ಕಳೆದುಹೋಗುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಾಟ್ಸಾಪ್ ಗ್ರೂಪ್ ಸೇರಿ: