ಮೈಸೂರು: ಸಿದ್ದರಾಮಯ್ಯರಿಗೆ ಈಗ ದೇವರು ಮಠಗಳು ನೆನಪಾಗಿದೆ. ಮುಡಾ ಹಗರಣವಾದ ಮೇಲಂತೂ ಅವರಿಗೆ ಹೆಚ್ಚಿನ ಭಕ್ತಿ ಬಂದಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಪ್ರಭಾವದಿಂದ ದೇವರ ಮೇಲೆ ಭಕ್ತಿ ಬಂದಿದೆ, ಈಗ ಅವರಿಗೆ ಮಠಗಳು ನೆನಪಾಗಿವೆ ಎಂದು ವ್ಯಂಗ್ಯವಾಡಿದ್ದಾರೆ.
ಮೊದಲು ಕುಂಕುಮವನ್ನೇ ಹಾಕಿಸಿಕೊಳ್ಳುತ್ತಿರಲಿಲ್ಲ, ಆದರೆ ಈಗ ಹುಡುಕಿಕೊಂಡು ಹೋಗಿ ದೇವರ ದರ್ಶನ ಮಾಡುತ್ತಿದ್ದಾರೆ. ಇದೆಲ್ಲ ಮುಡಾ ಹಗರಣದ ಪ್ರಭಾವ ಅನಿಸುತ್ತೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
ದೀಪಕ್ಕೆ ಸಿಕ್ಕ ಪತಂಗದಂತಾಗಿದೆ ಕಾಂಗ್ರೆಸ್ ಸರ್ಕಾರದ ಸ್ಥಿತಿ, ತಪ್ಪುಗಳ ಮೇಲೆ ತಪ್ಪುಗಳನ್ನು ಮಾಡಿಕೊಳ್ಳುತ್ತಿದೆ. ಒಂದು ತಪ್ಪು ಮುಚ್ಚಿಕೊಳ್ಳಲು ಮತ್ತೊಂದು ತಪ್ಪು ಮಾಡುತ್ತಿದೆ. ಮುಡಾ, ವಕ್ಫ್ ಎಲ್ಲದರಲ್ಲು ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296