ಮೈಸೂರು: ನಗರದ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ನಾಮಕರಣಕ್ಕೆ ಪಾಲಿಕೆ ಮುಂದಾಗಿತ್ತು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರೆ, ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದರು, ಇದೀಗ ಶಾಸಕ ಜಿಟಿ ದೇವೇಗೌಡ ಕೂಡ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಆ ರಸ್ತೆಗೆ ಪ್ರಿನ್ಸಸ್ ರಸ್ತೆ ಅಂತ ನಾಮಕರಣ ಮಾಡಿಲ್ಲ ಅನ್ನುವುದಾದರೆ, ಸಿದ್ದರಾಮಯ್ಯ ಅವರ ಹೆಸರನ್ನ ಇಟ್ಟರೇನು ತಪ್ಪಿಲ್ಲ. ಈಗಾಗಲೇ ಸಾಕಷ್ಟು ಚರ್ಚೆಗಳ ನಡೆಯುತ್ತಿವೆ ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.
ಸಂಸದ ಯದುವೀರ್ ಅವರು ಹೇಳುವಂತೆ ಆ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂದು ಹೆಸರಿಡಲಾಗಿದೆ ಎನ್ನುತ್ತಾರೆ. ಆದರೆ ಮತ್ತೆ ಕೆಲವರು ಆ ರಸ್ತೆಗೆ ಯಾವ ಹೆಸರನ್ನು ಇಟ್ಟಿಲ್ಲ ಎನ್ನುತ್ತಾರೆ. ಒಂದು ವೇಳೆ ಹೆಸರಿಟ್ಟಲ್ಲದಿದ್ದರೆ ಸಿದ್ದರಾಮಯ್ಯ ಅವರ ಹೆಸರು ಇಟ್ಟರೆ ತಪ್ಪಿಲ್ಲ ಎಂದು ಹೇಳುವ ಮೂಲಕ ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx