ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಹೆಸರು ಘೋಷಣೆ ಮಾಡುತ್ತಾರೆ.
ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ ಮಾತುಕತೆ ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ಕನ್ಫರ್ಮ್ ಆಗಿದೆ. ನಾವೆಲ್ಲ ಸಿದ್ದರಾಮಯ್ಯಗೆ ಶುಭಾಶಯ ತಿಳಿಸಿದ್ದೇವೆ. ಸಿದ್ದರಾಮಯ್ಯ ಕೂಡ ತುಂಬಾ ಖುಷಿಯಾಗಿದ್ದಾರೆ.
ಯಾವಾಗ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬುದು ಗೊತ್ತಿಲ್ಲ. ಡಿ.ಕೆ.ಶಿವಕುಮಾರ್ ಕೂಡ ನಾಯಕರನ್ನು ಭೇಟಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಕಾಂಗ್ರೆಸ್ ನಾಯಕಿ ಪುಷ್ಪಾ ಅಮರನಾಥ್ ತಿಳಿಸಿದ್ರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


