ಮೈಸೂರು: ಸಿದ್ದರಾಮಯ್ಯ ಅವರಿಗೆ ಆರೆಸ್ಸೆಸ್ ಭಯ ಕಾಡುತ್ತಿದೆ. ಹೀಗಾಗಿ ಪದೇ ಪದೇ ಅನಗತ್ಯ ಆರೋಪಗಳನ್ನು ಮಾಡುತ್ತಿರುತ್ತಾರೆ ಎಂದು ಸಂಸದ ಡಿ.ವಿ. ಸದಾನಂದಗೌಡ ಟೀಕಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಾಂಗ್ರೆಸ್ ಅಧಃಪತನದಲ್ಲಿದೆ. ಆದ್ದರಿಂದ ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಟ್ವೀಟ್ ಗಳನ್ನು ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ನ್ನು ದೊಡ್ಡ ದನಿಯಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿದ್ದ, ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ನೋಡಿದರೆ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಅವರು ತಿರುಗೇಟು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


