ರಾಜ್ಯ ರಾಜಕೀಯದಲ್ಲಿ ತನ್ನದೇ ಛಾಪು ಹೊಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಸಿನಿಮಾ ನಿರ್ಮಾಣದ ಸಿದ್ಧತೆ ನಡೆದಿದ್ದು, ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಸಿದ್ದರಾಮಯ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಹಯಾತ್ ಪೀರ್ ಸಾಬ್, ಎಂ.ಎಸ್. ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನು ತೆರೆಮೇಲೆ ತರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಿಚಾರ ಸದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.
ಬಯೋಪಿಕ್ ಮಾಡುವಾಗ ಮಾಹಿತಿಗಳು ಸ್ಪಷ್ಟವಾಗಿರಬೇಕು. ಹೆಚ್ಚು ಮಸಾಲೆ ಸೇರಿಸುವ ಪ್ರಯತ್ನ ನಡೆದರೆ ವಿವಾದ ಸೃಷ್ಟಿ ಆಗುತ್ತದೆ. ಈ ಕಾರಣಕ್ಕೆ ನಿರ್ಮಾಪಕರು ಸಿದ್ದರಾಮಯ್ಯ ಅವರಿಂದ ಒಪ್ಪಿಗೆ ಪಡೆದು ಅವರಿಂದಲೇ ಮಾಹಿತಿ ಪಡೆಯಲು ಮುಂದಾಗಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಮೊದಲ ಹಂತದ ಮಾತುಕತೆ ನಡೆದಿದೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ಜಮೀರ್ ಆಹ್ಮಮದ್ ನೇತೃತ್ವದಲ್ಲಿ ಈ ಮಾತುಕತೆ ನಡೆದಿದೆ ಎನ್ನಲಾಗಿದೆ.
ಈ ವಿಷಯವನ್ನು ಕಾಂಗ್ರೆಸ್ ಮುಖಂಡ ಶಿವರಾಜ್ ತಂಗಡಗಿ ಹೇಳಿದ್ದು, ನನ್ನ ಜೀವನಕಥೆ ಆಧಾರಿಸಿದ ಚಿತ್ರ ಮಾಡಲು ಮೊದಲು ಬಂದಿದ್ದರು. ಆದರೆ ಸಿದ್ದರಾಮಯ್ಯ ಅವರದ್ದು ಮಾಡಿದರೆ ಚೆನ್ನಾಗಿರುತ್ತೆ ಎಂದು ಸಲಹೆ ನೀಡಿದೆ. ಇದೀಗ ಅವರು ಸಿನಿಮಾ ಸಿದ್ಧತೆಯಲ್ಲಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


