ಕರ್ನಾಟಕ ಸಿಎಂ ಹುದ್ದೆ ವಿಚಾರವಾಗಿ ಕಳೆದ 5 ದಿನಗಳ ವರೆಗೆ ದೆಹಲಿಯಲ್ಲಿ ನಡೆದ ಸುದೀರ್ಘ ಮಾತುಕತೆಯ ಬಳಿಕ ಇದೀಗ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಅಂತಿಮ ನಿರ್ಧಾರ ಕೈಗೊಂಡಿದೆ.
ಕಳೆದ ರಾತ್ರಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರ ಜೊತೆ ನಡೆದ ಸಭೆಯಲ್ಲಿ ಒಮ್ಮತಕ್ಕೆ ಬಂದು ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.
ಸೋನಿಯಾ ಗಾಂಧಿಯ ಮಧ್ಯಸ್ಥಿಕೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಹೇಳಲಾಗಿದೆ. ಕಂಠೀರವ ಸ್ಟೇಡಿಯಂ ಬಳಿ ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್‌ಗಳು ಈಗಾಗಲೇ ರಾರಾಜಿಸುತ್ತಿವೆ. 2ನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿರುವ ಸಿದ್ದರಾಮಯ್ಯಗೆ ಶುಭಾಶಯಗಳು ಎಂದು ಫ್ಲೆಕ್ಸ್ ಗಳಲ್ಲಿ ಬರೆಯಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


