ಬಳ್ಳಾರಿ : ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಸಚಿವ ಶ್ರೀರಾಮುಲು ಅಚ್ಚರಿ ಮೂಡಿಸಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಕುರುಬ ಸಂಘದ ವಾಣಿಜ್ಯ ಮಳಿಗೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ಹಿಂದುಳಿದವರ ಅಭಿವೃದ್ಧಿ ವಿಚಾರಕ್ಕೆ ಬಂದರೆ ನಾನು ಹಾಗೂ ಸಿದ್ದರಾಮಯ್ಯನವರು ಒಂದೇ.
ಭಗವಂತ ಆಶೀರ್ವಾದ ಮಾಡಿದರೆ ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಎಂದು ನಾನೂ ಸಹ ಆಸೆ ಪಡುತ್ತೇನೆ ಎಂದು ಹೇಳಿದರು. ಅಲ್ಲದೆ ವೈಯಕ್ತಿಕವಾಗಿ ನನಗೂ ಹಾಗೂ ಸಿದ್ದರಾಮಯ್ಯನವರ ಮಧ್ಯೆ ಏನೂ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz