ತುಮಕೂರು: ಹುಟ್ಟು ಹಬ್ಬ ಆಚರಣೆ ಮಾಡಿ ಎಂದು ಸಿದ್ದರಾಮಯ್ಯನವರು ಯಾರಿಗೂ ಹೇಳಿಲ್ಲ. ಅವರು ಯಾವ ವರ್ಷನೂ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡವರಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಬ್ಬ ಮಾಸ್ ಲೀಡರ್. 40 ವರ್ಷದ ರಾಜಕೀಯದಲ್ಲಿ ಇರುವುದರಿಂದ ಸ್ವಾಭಾವಿಕವಾಗಿ ಪ್ರೀತಿ ವಿಶ್ವಾಸದಿಂದ ಮಾಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಇದೊಂದು ಒಳ್ಳೆಯ ಅವಕಾಶ. ಇದರಿಂದ ನಮ್ಮ ಪಕ್ಷಕ್ಕೆ ಒಂದು ರೀತಿಯ ಬೆಂಬಲ ಸಿಕ್ಕಿದೆ ಎಂದು ಅವರು ಸಿದ್ದರಾಮೋತ್ಸವದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.
ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ರೇಡ್ ವಿಚಾರವಾಗಿ ಮಾತನಾಡಿದ ಅವರು, ಎಸಿಬಿಯವರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ, ಪುನಃ ಪುನಃ ಮಾಹಿತಿ ಪಡೆಯಲು ರೇಡ್ ಮಾಡುತ್ತಿರಬಹುದು. ಈ ಬಗ್ಗೆ ನಮ್ಮ ಪಕ್ಷದ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡಿದ್ದಾರೆ ಎಂದರು.
ಕೇಂದ್ರ ಸರ್ಕಾರ ಇಡಿ, ಐಟಿ, ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಿತ್ತಿದೆ ಅಂತ ಹೇಳಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz