ಕೋಲಾರ: ಸಿದ್ದರಾಮಯ್ಯನವರು ಎಲ್ಲರನ್ನೂ ಮುಗಿಸಿದ್ದಾರೆ. ಇದೀಗ ನನ್ನನ್ನು ಮುಗಿಸಲು ಬಂದಿದ್ದಾರೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದ ಅವರು, ಆನೆ ಸೊಂಡಿಲಿನಿಂದ ಮಣ್ಣು ಮೇಲೆ ಹಾಕಿಕೊಂಡಂತೆ ಸಿದ್ದರಾಮಯ್ಯ ತಾನಾಗಿ ಮಣ್ಣು ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯನವರಿಗೆ ಕೇಡುಗಾಲ ಆರಂಭವಾಗಿದೆ ಎಂದಿದ್ದಾರೆ.
ಕೋಲಾರಕ್ಕೆ ಸಿದ್ದರಾಮಯ್ಯ ಅಂತ, ವಿಶೇಷವಾಗಿ ಪರಿಗಣಿಸಬೇಕಿಲ್ಲ, ಚಾಮುಂಡಿ ಕ್ಷೇತ್ರದಲ್ಲಿ 40 ಮತಗಳ ಅಂತರದಲ್ಲಿ ಅವರು ಸೋತಿದ್ದಾರೆ ಎಂದ ಅವರು, ಬಾದಾಮಿಯಲ್ಲಿ ಸೋಲುತ್ತಾರೆ ಅನ್ನೋ ಭಯಕ್ಕೆ ಎಲ್ಲರನ್ನೂ ಮುಗಿಸಿದ್ದಾರೆ. ಇದೀಗ ನನ್ನನ್ನು ಮುಗಿಸಲು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


