ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಸಿಎಂ ಸಿದ‍್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ಇದೆ. ಈ ನಡುವೆ ಸಿದ್ಧರಾಮಯ್ಯ ಹೋದಲೆಲ್ಲಾ ಅವರ ಅಭಿಮಾನಿಗಳು ಸಿದ್ಧರಾಮಯ್ಯ ಮುಂದಿನ ಸಿಎಂ ಎಂಬ ಘೋಷಣೆ ಕೂಗುವುದು ಸಾಮಾನ್ಯವಾಗಿಬಿಟ್ಟಿದೆ.
ಈ ಮಧ್ಯೆ ಮತ್ತೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಕೂಗು ಮೊಳಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಸಿದ‍್ಧರಾಮಯ್ಯ ಅಭಿಮಾನಿಗಳು ಈ ಘೋಷಣೆಯನ್ನ ಕೂಗಿದ್ದಾರೆ.
ಸಂಶಿ ಗ್ರಾಮದಲ್ಲಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೂ ಮುನ್ನ ಸಿದ್ಧರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಗ್ರಾಮದ ಕರಿಸಿದ್ದೇಶ್ವರ ದೇಗಲದಲ್ಲಿ ಪೂಜೆ ಸಲ್ಲಿಸಿದ್ದರು. ಈ ವೇಳೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy