ಬಾಗಲಕೋಟೆ: ಸಿಎಂ ಬಸವರಾಜ ಬೊಮ್ಮಾಯಿ ವೀಕ್ ಲೀಡರ್ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ರಾಜಕೀಯದಲ್ಲಿ ಸಿದ್ದರಾಮಯ್ಯನಂಥ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ ಎಂದು ಕಿಡಿಕಾರಿದ್ದಾರೆ.ಕಾಂಗ್ರೆಸ್ನಲ್ಲಿ ಯಾರ ನೇತೃತ್ವ ಕ್ಷೇತ್ರ ಗೊತ್ತಿಲ್ಲ, ಜನರು ಓಟ್ ಕೊಟ್ಟು ಗೆಲ್ಲಿಸಿಲ್ಲ. ಆಗಲೇ ನಾನೇ ಮುಖ್ಯಮಂತ್ರಿ ಅಂತಿದ್ದೀರಿ. ರಾಜಕಾರಣದಲ್ಲಿ ಇಂಥ ದ್ರೋಹಿ ಯಾರೂ ನೋಡಿಲ್ಲ, ಮುಂದೆ ನೋಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವೀಕ್ ಲೀಡರ್ ಆಗಿದ್ದಕ್ಕೆ ಸೋತಿದ್ದು. ಸಿದ್ದರಾಮಯ್ಯ ಸ್ಟ್ರಾಂಗ್ ಸಿಎಂ ಆಗಿದ್ದರೆ ಯಾಕೆ ಸೋಲುತ್ತಿದ್ದರು.. ಯಾವಾಗಲೂ ಯಾರು ವೀಕ್ ಅಂತಾ ಹೇಳ್ತಾರೋ ಅವರೇ ವೀಕ್. ಒಂದು ಬಾರಿ ಬಾದಾಮಿ, ಮತ್ತೊಮ್ಮೆ ಕೋಲಾರ, ವರುಣಾ ಅಂತೀರಿ. ನಿಮಗೆ ನಿಮ್ಮ ಅಪ್ಪ-ಅಮ್ಮ ಯಾರೂ ಅಂತಾನೇ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy