ಬಾಗಲಕೋಟೆ: ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ.
ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದವ ಎಂದು ತಿಳಿದು ಬಂದಿದೆ.
ದುರ್ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz