ತುಮಕೂರು: ಕೊರಟಗೆರೆ ತಾಲ್ಲೂಕಿನ ಸುಕ್ಷೇತ್ರ ಸಿದ್ದರಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ನೋಂದಣಿ ಪ್ರಕ್ರಿಯೆ ಚಾಲನೆ ಪಡೆದುಕೊಂಡಿದೆ. ಮದುವೆಯಾಗಲು ಬಯಸುವ ಅರ್ಹ ವಧು–ವರರು ಶ್ರೀಮಠದಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 21 ರ ಭಾನುವಾರದಂದು ಶ್ರೀಮಠದಲ್ಲಿ 20ನೇ ವಾರ್ಷಿಕೋತ್ಸವ, ಜಗದ್ಗುರು ರೇಣುಕಾಚಾರ್ಯ ಹಾಗೂ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ ನಡೆಯಲಿದೆ. ಈ ಪವಿತ್ರ ದಿನದಂದೇ ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಂಸ್ಕಾರದೊಂದಿಗೆ, ಮಧ್ಯಾಹ್ನ 12.30ಕ್ಕೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಲಿದೆ.
ವಯೋಮಿತಿ: ವಿವಾಹವಾಗಲಿರುವ ವಧುವಿಗೆ ಕನಿಷ್ಠ 18 ವರ್ಷ ಹಾಗೂ ವರನಿಗೆ 21 ವರ್ಷ ತುಂಬಿರಬೇಕು.
ದಾಖಲಾತಿಗಳು: ವಧು–ವರರ ಪೋಷಕರು ಅಥವಾ ಸಂಬಂಧಿಕರು ಅಗತ್ಯ ದಾಖಲೆಗಳೊಂದಿಗೆ ಶ್ರೀಮಠಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಕೊನೆಯ ದಿನಾಂಕ: ಮೇ 31ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಸಾಮೂಹಿಕ ವಿವಾಹದ ಕುರಿತು ಹೆಚ್ಚಿನ ವಿವರಗಳಿಗಾಗಿ ದೊಡ್ಡೇಗೌಡರು (9482721789) ಅಥವಾ ಶಿವಾನಂದಪ್ಪ (9481204166) ಅವರನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


