ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಖಾಸಾ ಶಾಖ ಮಠದ 20ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಪೂರ್ವಭಾವಿ ಸಭೆಯು ಯಶಸ್ವಿಯಾಗಿ ಜರುಗಿತು.
ಶ್ರೀ ಮಠದ ಈ ಐತಿಹಾಸಿಕ 20ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ದಿನಾಂಕ: 21/06/2026ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಅದ್ಧೂರಿಯಾಗಿ ನಡೆಯಲಿದೆ.
ಈ ಸಮಾರಂಭವು ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವದ್ಪಾದರ ದಿವ್ಯ ಸಾನಿಧ್ಯದಲ್ಲಿ ಹಾಗೂ ಸಿದ್ದರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಜರುಗಲಿದೆ.
ಸಿದ್ಧ ಶ್ರೀ ಪ್ರಶಸ್ತಿ: ಈ ಬಾರಿಯ ಪ್ರತಿಷ್ಠಿತ ‘ಸಿದ್ಧ ಶ್ರೀ’ ಪ್ರಶಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರಿಗೆ ನೀಡಿ ಗೌರವಿಸಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಾರ್ಷಿಕೋತ್ಸವದ ಅಂಗವಾಗಿ ಮಧ್ಯಾಹ್ನ 12 ಗಂಟೆಯ ಶುಭ ‘ಅಭಿಜಿತ್ ಲಗ್ನ’ದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹಗಳು ಜರುಗಲಿವೆ. ಶ್ರೀ ಜಗದ್ಗುರು ರೇಣುಕಾಚಾರ್ಯ ಹಾಗೂ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತೋತ್ಸವ, ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಮಾರಂಭ ಮತ್ತು ಜನಜಾಗೃತಿ ಧರ್ಮ ಸಮಾವೇಶ ನಡೆಯಲಿದೆ.
ಈ ಬೃಹತ್ ಸಮಾವೇಶದಲ್ಲಿ ಶ್ರೀ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಜಿಲ್ಲೆಯ ಪ್ರಮುಖ ರಾಜಕಾರಣಿಗಳು, ವಿವಿಧ ಮಠಗಳ ಮಠಾಧೀಶರು, ಸಾಧು–ಸಂತರು, ಹರ ಗುರು ಚರಮೂರ್ತಿಗಳು, ಸಂಸದರು, ಶಾಸಕರು ಮತ್ತು ಸರ್ಕಾರದ ಸಚಿವರು ಭಾಗವಹಿಸಲಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದ್ದಾರೆ.
“ಉಚಿತ ಸಾಮೂಹಿಕ ಆದರ್ಶ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವ ನೂತನ ವಧು–ವರರು ಕೂಡಲೇ ಸೂಕ್ತ ದಾಖಲಾತಿಗಳೊಂದಿಗೆ ಶ್ರೀ ಮಠದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು” ಎಂದು ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳು ಮಾಧ್ಯಮಗಳ ಮೂಲಕ ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


