nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ

    November 25, 2026

    ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ವೃದ್ಧಾಶ್ರಮಗಳಿಗೆ ದಿನಸಿ, ಹಣ್ಣು ವಿತರಣೆ

    November 25, 2026

    ಕೈದಾಳದ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ | ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಗಣ್ಯರು

    November 25, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ
    • ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ವೃದ್ಧಾಶ್ರಮಗಳಿಗೆ ದಿನಸಿ, ಹಣ್ಣು ವಿತರಣೆ
    • ಕೈದಾಳದ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ | ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಗಣ್ಯರು
    • ಹೆಬ್ಬೂರಿನಲ್ಲಿ ಅಟಲ್‌ಜಿ ಜನಸ್ನೇಹಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ :  ಗ್ರಾಮೀಣ ಜನರಿಗೆ ಸರ್ಕಾರಿ ಸೇವೆಗಳು ತ್ವರಿತವಾಗಿ ದೊರೆಯಲು ಅನುಕೂಲ: ಡಾ.ಜಿ.ಪರಮೇಶ್ವರ್
    • 300 ಮೊಟ್ಟೆ ಚಾಕಿಯಿಂದ 250 ಕೆ.ಜಿ. ರೇಷ್ಮೆ ಗೂಡು ಉತ್ಪಾದನೆ ಸಾಧ್ಯ: ಮೋಹನ್
    • ಸಂಪಾದಕೀಯ: ಆರ್ಥಿಕ ಪಾರದರ್ಶಕತೆಯ ಕವಚ — ಕಾರ್ಪೊರೇಟ್ ವಲಯದಲ್ಲಿ UDIN ಕಡ್ಡಾಯ ನಿಯಮದ ಮಹತ್ವ
    • ಮನುಷ್ಯನಿಗೆ ಆರೋಗ್ಯವೇ ನಿಜವಾದ ಭಾಗ್ಯ: ಡಾ.ಹನುಮಂತನಾಥ ಸ್ವಾಮೀಜಿ
    • ವಿವಾಹ ಪ್ರಮಾಣಪತ್ರ ಪಡೆಯುವ ವಿಧಾನ ಇಲ್ಲಿದೆ! | ವಿವಾಹ ಪ್ರಮಾಣಪತ್ರ ಇಲ್ಲದಿದ್ದರೆ ಏನೆಲ್ಲ ತೊಂದರೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ
    ಕೊರಟಗೆರೆ March 22, 2026

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    By adminMarch 22, 2026No Comments1 Min Read
    siddarabetta shri

    ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಖಾಸಾ ಶಾಖ ಮಠದ 20ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಪೂರ್ವಭಾವಿ ಸಭೆಯು ಯಶಸ್ವಿಯಾಗಿ ಜರುಗಿತು.

    ಶ್ರೀ ಮಠದ ಈ ಐತಿಹಾಸಿಕ 20ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ದಿನಾಂಕ: 21/06/2026ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಅದ್ಧೂರಿಯಾಗಿ ನಡೆಯಲಿದೆ.

    ಈ ಸಮಾರಂಭವು ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವದ್ಪಾದರ ದಿವ್ಯ ಸಾನಿಧ್ಯದಲ್ಲಿ ಹಾಗೂ ಸಿದ್ದರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಜರುಗಲಿದೆ.

    ಸಿದ್ಧ ಶ್ರೀ ಪ್ರಶಸ್ತಿ: ಈ ಬಾರಿಯ ಪ್ರತಿಷ್ಠಿತ ‘ಸಿದ್ಧ ಶ್ರೀ’ ಪ್ರಶಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರಿಗೆ ನೀಡಿ ಗೌರವಿಸಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

    ವಾರ್ಷಿಕೋತ್ಸವದ ಅಂಗವಾಗಿ ಮಧ್ಯಾಹ್ನ 12 ಗಂಟೆಯ ಶುಭ ‘ಅಭಿಜಿತ್ ಲಗ್ನ’ದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹಗಳು ಜರುಗಲಿವೆ. ಶ್ರೀ ಜಗದ್ಗುರು ರೇಣುಕಾಚಾರ್ಯ ಹಾಗೂ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತೋತ್ಸವ, ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಮಾರಂಭ ಮತ್ತು ಜನಜಾಗೃತಿ ಧರ್ಮ ಸಮಾವೇಶ ನಡೆಯಲಿದೆ.

    ಈ ಬೃಹತ್ ಸಮಾವೇಶದಲ್ಲಿ ಶ್ರೀ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಜಿಲ್ಲೆಯ ಪ್ರಮುಖ ರಾಜಕಾರಣಿಗಳು, ವಿವಿಧ ಮಠಗಳ ಮಠಾಧೀಶರು, ಸಾಧು–ಸಂತರು, ಹರ ಗುರು ಚರಮೂರ್ತಿಗಳು, ಸಂಸದರು, ಶಾಸಕರು ಮತ್ತು ಸರ್ಕಾರದ ಸಚಿವರು ಭಾಗವಹಿಸಲಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದ್ದಾರೆ.

    “ಉಚಿತ ಸಾಮೂಹಿಕ ಆದರ್ಶ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವ ನೂತನ ವಧು–ವರರು ಕೂಡಲೇ ಸೂಕ್ತ ದಾಖಲಾತಿಗಳೊಂದಿಗೆ ಶ್ರೀ ಮಠದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು” ಎಂದು ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳು ಮಾಧ್ಯಮಗಳ ಮೂಲಕ ಕೋರಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ

    November 25, 2026

    ಕೊರಟಗೆರೆ TAPCMS ಅಧ್ಯಕ್ಷರಾಗಿ ವಿನಯ್ ಕುಮಾರ್ ಅವಿರೋಧ ಆಯ್ಕೆ

    November 24, 2026

    ಕೊರಟಗೆರೆ ರಾಜಕೀಯಕ್ಕೆ ಲೆಕ್ಕಾಚಾರದಲ್ಲಿ ಹೊಸ ತಿರುವು! | ಟಿಕೆಟ್ ಲೆಕ್ಕಾಚಾರ ಬದಲು, ಮೀಸಲಾತಿ ಲೆಕ್ಕಾಚಾರದಲ್ಲಿ ತಿರುವು

    November 24, 2026

    Leave A Reply Cancel Reply

    Our Picks

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!

    November 24, 2026

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ

    November 25, 2026

    ಕೊರಟಗೆರೆ: ಯಾವ ಭಾಷೆ ಹೆಚ್ಚು ಬಳಕೆಯಾಗುತ್ತದೆಯೋ ಆ ಭಾಷೆ ಜನಜೀವನದಲ್ಲಿ ಅಷ್ಟೇ ಗಟ್ಟಿಯಾಗಿ ನೆಲೆಯೂರುತ್ತದೆ. ನಿರಂತರ ಬಳಕೆಯಿಂದ ಮಾತ್ರ ಭಾಷೆಯ…

    ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ವೃದ್ಧಾಶ್ರಮಗಳಿಗೆ ದಿನಸಿ, ಹಣ್ಣು ವಿತರಣೆ

    November 25, 2026

    ಕೈದಾಳದ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ | ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಗಣ್ಯರು

    November 25, 2026

    ಹೆಬ್ಬೂರಿನಲ್ಲಿ ಅಟಲ್‌ಜಿ ಜನಸ್ನೇಹಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ :  ಗ್ರಾಮೀಣ ಜನರಿಗೆ ಸರ್ಕಾರಿ ಸೇವೆಗಳು ತ್ವರಿತವಾಗಿ ದೊರೆಯಲು ಅನುಕೂಲ: ಡಾ.ಜಿ.ಪರಮೇಶ್ವರ್

    November 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.