ಹುಬ್ಬಳ್ಳಿ: ಸಿದ್ದರಾಮಯ್ಯ ಮೇಲೆ ಬಹಳ ಗೌರವ ಇತ್ತು. ಆದರೆ ಇತ್ತೀಚೆಗೆ ಅವರ ಹೇಳಿಕೆಗಳಿಂದ ನಿರಾಸೆಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಸಿಎಂ ಬಸವರಾಜ್ ಬೊಮ್ಮಾಯಿ ಸುಳ್ಳು ಹೇಳುತ್ತಾರೆ” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೇಸರ ವ್ಯಕ್ತಡಿಸಿದ ಬೊಮ್ಮಾಯಿ, ಸಿದ್ದರಾಮಯ್ಯನವರ ಮೇಲೆ ಬಹಳ ಗೌರವವಿತ್ತು. ಆದರೆ, ಇತ್ತೀಚೆಗಿನ ಅವರ ಹೇಳಿಕೆಯಿಂದ ನಿರಾಸೆಯಾಗಿದೆ ಎಂದು ಅವರು ಹೇಳಿದರು.
ಸಂಪುಟ ವಿಸ್ತರಣೆ ಬಗ್ಗೆ ಶಾಸಕ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿಎಂ ಎಲ್ಲರ ಹೇಳಿಕೆಗಳಿಗೂ ನಾನು ಪ್ರತಿಕ್ರಿಯಿಸುತ್ತಾ ಇರಲು ಆಗುವುದಿಲ್ಲ ಎಂದರು.
ಇನ್ನು ಕೋವಿಡ್ ಮೂರನೆ ಅಲೆ ತಡೆಗಟ್ಟಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದಷ್ಟು ಬೇಗ ಟೆಸ್ಟ್ ವರದಿ ಬರುವಂತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಇನ್ನು ಒಮಿಕ್ರಾನ್ ವೇಗವಾಗಿ ಹರಡುತ್ತೆ ಆದರೆ ತೀವ್ರತೆ ಕಡಿಮೆ ಎಂಬ ಮಾಹಿತಿ ಇದೆ. ಜನರು ಎಚ್ಚರದಿಂದ ಇರುವುದು ಅಗತ್ಯ ಎಂದು ಹೇಳಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700