ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆಗೆ ಸಜ್ಜಾಗಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಪುಸ್ತಕ ಬಿಡುಗಡೆಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ.
ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಬಿಜೆಪಿ ನಾಯಕರು ಇಂದು ಸಿದ್ದರಾಮಯ್ಯ ವಿರುದ್ಧ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು.
ಪುಸ್ತಕ ಬಿಡುಗಡೆಗೆ ತಡೆ ಕೋರಿ ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಸಚಿವ ಅಶ್ವತ್ಥನಾರಾಯಣ ಸೇರಿ ಹಲವರಿಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


