nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಪತರು ನಾಡಿನಲ್ಲಿ ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ | ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿ, ರಥೋತ್ಸವಕ್ಕೆ ಸಿದ್ಧತೆ
    ರಾಜ್ಯ ಸುದ್ದಿ March 2, 2022

    ಕಲ್ಪತರು ನಾಡಿನಲ್ಲಿ ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ | ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿ, ರಥೋತ್ಸವಕ್ಕೆ ಸಿದ್ಧತೆ

    By adminMarch 2, 2022No Comments2 Mins Read
    siddaganga

    ತುಮಕೂರು: ಮೈಸೂರಿಗೆ ದಸರಾ ಹಬ್ಬ ಹೇಗೆ ಭೂಷಣವೋ, ಹಾಗೆಯೇ ಕಲ್ಪತರು ನಾಡಿಗೆ ಸಿದ್ದಗಂಗಾ ಮಠ ಜಾತ್ರೆ ಕೂಡ ಪ್ರಮುಖ ಹಬ್ಬವಾಗಿದೆ. ಈ ಜಾತ್ರೆಯ ಸಂದರ್ಭದಲ್ಲಿ ಮಠದಲ್ಲಿ ಭಕ್ತರಿಗೆ ವಿತರಿಸಲಾಗುವ ಪ್ರಸಾದ ಕೂಡ ವಿಶೇಷತೆಯಿಂದ ಕೂಡಿದೆ.

    ಕೊರೊನಾದಿಂದ ಕಳೆಗುಂದಿದ್ದ ಜಾತ್ರೆಯನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಜಾತ್ರೆಗೆ ಆಗಮಿಸುತ್ತಿರುವ ಭಕ್ತರಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ಶಿವರಾತ್ರಿ  ಅಂಗವಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ತಂಬಿಟ್ಟು ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಕಡ್ಲೆ, ಶೇಂಗಾ, ಅಕ್ಕಿ, ಎಳ್ಳು, ಕೊಬ್ಬರಿ,  ಏಲಕ್ಕಿಯಂತಹ ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿಸಲಾಗಿದೆ.

    ಈ ವಿಶೇಷ ಸಂದರ್ಭದಲ್ಲಿ ಮಾತನಾಡಿದ ಸಿದ್ದಗಂಗಾ ಮಠದ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಕೆ.ಎಸ್. ಉಮಾಮಹೇಶ್ , ನಮ್ಮ ಸಿದ್ದಗಂಗಾಮಠವು ಸುಮಾರು ಏಳು  ಶತಮಾನವುಳ್ಳ ಮಠವಾಗಿದೆ. ಗ್ರಾಮೀಣ ಪ್ರದೇಶದವರ ಶ್ರೇಯೋಭಿವೃದ್ಧಿಗಾಗಿ ತುಡಿತ ಹೊಂದಿದ್ದ ಲಿಂಗೈಕ್ಯ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು 1964ರಲ್ಲಿ ಸಣ್ಣ ಪ್ರಮಾಣದಲ್ಲಿ ಈ ವಸ್ತು ಪ್ರದರ್ಶನವನ್ನು ಪ್ರಾರಂಭಿಸಿದರು. ಇಂದು ಹೆಮ್ಮರವಾಗಿ ಬೆಳೆದು ನಾಡಿನ ಬೃಹತ್ ಪ್ರಸಿದ್ದ ವಸ್ತು ಪ್ರದರ್ಶನವೆಂದು ಹೆಗ್ಗಳಿಕೆ ಪಡೆದುಕೊಂಡಿದೆ.  ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಯ ಅಂಗವಾಗಿ ಕಳೆದ 56 ವರ್ಷಗಳಿಂದ ಪ್ರತಿವರ್ಷ ಈ ವಸ್ತು ಪ್ರದರ್ಶನವು ನಡೆಯುತ್ತಾ ಬಂದಿದ್ದು, 2022 ರ ಈ ವರ್ಷದ ವಸ್ತು ಪ್ರದರ್ಶನವು 58ನೇ ಪ್ರದರ್ಶನವಾಗಿದೆ ಎಂದು ಹೇಳಿದರು.

    ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರದ ವಿವಿಧ ಕ್ಷೇತ್ರಗಳಲ್ಲಿ ಕೈಗಾರಿಕಾ, ಕೃಷಿ, ಆರೋಗ್ಯ, ತೋಟಗಾರಿಕೆ, ಅರಣ್ಯ, ರೇಷ್ಮೆ, ನೀರಾವರಿ, ಶಿಕ್ಷಣ, ಪಶುಪಾಲನೆ, ಮೀನುಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಉಂಟಾಗಿರುವ ವೈಜ್ಞಾನಿಕ ಬದಲಾವಣೆಗಳನ್ನು ವಸ್ತು ಪ್ರದರ್ಶನಕ್ಕೆ ಭೇಟಿ ನೀಡುವ ಜನರಿಗೆ ಮನವರಿಕೆ ಮಾಡಿಕೊಡುವ ವಸ್ತು ಪ್ರದರ್ಶನ ಉದ್ದೇಶವಾಗಿದೆ. ರಾಜ್ಯ ಸರಕಾರಗಳ ಇಲಾಖೆಗಳಲ್ಲದೇ ಕೇಂದ್ರ ಸರಕಾರದ ಸ್ವಾಮ್ಯಕ್ಕೆ ಒಳಪಟ್ಟ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂತಾದ ಸಂಸ್ಥೆಗಳೂ ಸಹ ಮಳಿಗೆಗಳನ್ನು ತೆರೆದು ತಮ್ಮಲ್ಲಿರುವ ಯೋಜನೆಗಳು ಹಾಗೂ ರೈತರಿಗೆ ದೊರೆಯುವ  ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಖಾಸಗಿ ಸಂಘ- ಸಂಸ್ಥೆಗಳವರೂ ಸಹ ವಸ್ತು ಪ್ರದರ್ಶನದಲ್ಲಿ ನಿತ್ಯ ಬಳಕೆಯ ವಸ್ತುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

    ವಸ್ತು ಪ್ರದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡುವವರಿಗೆ ಪಾರಿತೋಷಕ ಹಾಗೂ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ. ಪ್ರದರ್ಶನದ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಪ್ರತಿನಿತ್ಯ ಸಂಜೆ ಖ್ಯಾತ ಕಲಾವಿದರುಗಳಿಂದ ಸುಗಮ ಸಂಗೀತ, ವಚನ ಗಾಯನ, ಭರತನಾಟ್ಯ, ಯಕ್ಷಗಾನ, ಮಕ್ಕಳಿಂದ ಸಾಂಸ್ಕ್ರೃತಿಕ ಸಂಜೆ , ನಾಟಕ ಹಾಗೂ ಮುಂತಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

     ಪ್ರವೇಶದ್ವಾರ ಸಂಚಾಲಕರಾದ ಕೆ ಬಸವಯ್ಯ ಮಾತನಾಡಿ,  ನಾನು ೧೯೬೮ ರಲ್ಲಿ ನಾನು ಇಲ್ಲಿಗೆ ಬಡವಿದ್ಯಾರ್ಥಿಯಾಗಿ ಬಂದಿದ್ದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರದ ವಿವಿಧ ಕ್ಷೇತ್ರಗಳಲ್ಲಿ ಕೈಗಾರಿಕಾ, ಕೃಷಿ, ಆರೋಗ್ಯ, ತೋಟಗಾರಿಕೆ, ಅರಣ್ಯ, ರೇಷ್ಮೆ, ನೀರಾವರಿ, ಶಿಕ್ಷಣ, ಪಶುಪಾಲನೆ, ಮೀನುಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಉಂಟಾಗಿರುವ ವೈಜ್ಞಾನಿಕ ಬದಲಾವಣೆಗಳನ್ನು ವಸ್ತು ಪ್ರದರ್ಶನಕ್ಕೆ ಜಾತ್ರೆಗೆ ಭೇಟಿ ನೀಡುವ ಜನರಿಗೆ ವಸತಿಗಳಾದ ನೀರು, ಆಹಾರ, ಎಲ್ಲವನ್ನೂ ಸಹ ರೈತ ಕುಟುಂಬಗಳಿಗೆ ಮಾತ್ರವಲ್ಲದೆ  ಪ್ರತಿ ಕುಟುಂಬಗಳಿಗೂ ಸಹ   ನೀಡುವುದಾಗಿ ತಿಳಿಸಿದರು.

    ವರದಿ: ಮುರುಳಿಧರನ್ ಆರ್.,  ಹಿರಿಯೂರು. ( ಚಿತ್ರದುರ್ಗ-ತುಮಕೂರು ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.