ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಬಾಲ ತಪಸ್ವಿ, ಸುವರ್ಣ ಶ್ರೀ, ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರ 41 ನೇ ಜನ್ಮದಿನದ ಅಂಗವಾಗಿ ಶ್ರೀ ಮಠಕ್ಕೆ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳನ್ನು ಸನ್ಮಾನಿಸಿ ಶುಭ ಹಾರೈಸಿದರು.
ನಂತರ ಶ್ರೀಗಳು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ರವರನ್ನು ಶ್ರೀಗಳು ಸನ್ಮಾನಿಸಿ ಸಂಘಟನೆಯ ಬಗ್ಗೆ ಕೆಲವೊಂದು ಮಾರ್ಗದರ್ಶನವನ್ನು ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜ್, ತಾಲ್ಲೂಕು ಅಧ್ಯಕ್ಷ ಮಂಜುಸ್ವಾಮಿ ಎಂ.ಎನ್., ರಾಕೇಶ್ ಗಂಗಾಧರ್, ಪುಟ್ಟರಾಜು, ಮಹದೇವ್ ಇತರರು ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz