ತಿಪಟೂರು: ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯವೊಂದು ನಡೆದಿದೆ. ಹೆತ್ತ ಮಗಳ ಮೇಲೆಯೇ ಕಾಮುಕ ತಂದೆಯು ಅತ್ಯಚಾರ ನಡೆಸಿದ್ದಾನೆ. ಈ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.
13ವರ್ಷದ ಅಪ್ರಾಪ್ತೆ ಮಗಳ ಮೇಲೆ ಆತ್ಯಾಚಾರ ನಡೆಸಿ ತಂದೆ ಪರಾರಿಯಾಗಿದ್ದಾರೆ. ಈ ಹಿಂದೆಯೂ ಒಮ್ಮೆ ಮಗಳ ಮೇಲೆ ಆತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ.
ಘಟನೆ ಕುರಿತು ತಾಯಿಯಿಂದ ತಿಪಟೂರು ನಗರ ಠಾಣೆಗೆ ದೂರು ನೀಡಲಾಗಿದ್ದು, ತಾಯಿಯ ದೂರಿನ ಅನ್ವಯ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಕೊಂಡಿದ್ದಾರೆ.
ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ತಿಪಟೂರು ನಗರ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296