ಸಂಗೀತ ಮಾಂತ್ರಿಕ ಎಂದೇ ಖ್ಯಾತವಾಗಿರುವ ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ ಭವತಾರಿಣಿ ಹಠಾತ್ ನಿಧನರಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅಲ್ಲಿಯೇ ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ಅವರ ಮೃತದೇಹವನ್ನು ಚೆನ್ನೈನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದೆಂದು ಹೇಳಲಾಗುತ್ತಿದೆ. ಅವರ ನಿಧನಕ್ಕೆ ತಮಿಳು ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.


