ಚಂಡಿಗಢ ವಿಮಾನ ನಿಲ್ದಾಣದಲ್ಲಿ ನಟಿ ಹಾಗೂ ನೂತನ ಸಂಸದೆ ಕಂಗನಾ ರಣಾವತ್ ಅವರಿಗೆ ಭದ್ರತಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರಿಗೆ ಗಾಯಕ ವಿಶಾಲ್ ದದ್ಲಾನಿ ಕೆಲಸದ ಆಫರ್ ನೀಡಿದ್ದಾರೆ.
‘ನಾನು ಎಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ಕುಲ್ವಿಂದರ್ ಕೌರ್ ವಿರುದ್ಧ ಸಿಐಎಸ್ ಎಫ್ ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್, ಜೈ ಜವಾನ್, ಕೈ ಕಿಸಾನ್’ ಎಂದು ವಿಶಾಲ್ ದದ್ಲಾನಿ ಇನ್ ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
‘ಸ್ಕ್ಯಾನ್ ಮಾಡಲು ಕಂಗನಾ ಅವರಿಗೆ ತಮ್ಮ ಫೋನ್ ನೀಡಲು ಸೂಚಿಸಲಾಯಿತು. ಆದರೆ ಈಗ ತಾನು ಸಂಸದೆ ಎಂಬ ಕಾರಣಕ್ಕೆ ಅವರು ಫೋನ್ ನೀಡಲು ನಿರಾಕರಿಸಿದರು. ಅಲ್ಲಿಂದ ವಾಗ್ವಾದ ಶುರುವಾಯಿತು. ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ತೆಗೆದುಹಾಕಿದರೆ ಯಾರಾದರೂ ಅವರನ್ನು ನನ್ನ ಸಂಪರ್ಕಕ್ಕೆ ತನ್ನಿ. ಅವರಿಗೆ ಉತ್ತಮ ಉದ್ಯೋಗ ನೀಡುತ್ತೇನೆ’ ಎಂದು ವಿಶಾಲ್ ದದ್ಲಾನಿ ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296