nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ

    October 28, 2026

    ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!

    October 28, 2026
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ
    • ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ
    • ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!
    • ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?
    • ಎಸ್.ಎಸ್. ವೃತ್ತದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ವೀಕ್ಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ
    • ಪಾವಗಡ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
    • ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು
    ತುಮಕೂರು October 28, 2026

    ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು

    By Ganesh TumkuruOctober 28, 2026No Comments2 Mins Read
    sir

    ತುಮಕೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯುಡಿ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 20,94,762 ಮತದಾರರಿದ್ದಾರೆ ಎಂದು ಅಪರ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಯ ಎನ್ಐಸಿ ವೆಬ್ಸೈಟ್ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್ಸೈಟ್ನಲ್ಲಿ ಪ್ರಚುರಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ ಯಾವುದೇ ನ್ಯೂನತೆಗಳಿದ್ದಲ್ಲಿ, ಹೆಸರು ಬಿಟ್ಟು ಹೋಗಿದ್ದರೆ, ತಿದ್ದುಪಡಿಗಳಲ್ಲಿ ನಿರಂತರ ಪರಿಷ್ಕರಣೆಯಡಿ ನಿಗದಿತ ನಮೂನೆ-6, 7 ಮತ್ತು 8ರಲ್ಲಿ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

    ಅಂತಿಮ ಮತದಾರರ ಪಟ್ಟಿ ಪರಿಶೀಲಿಸಿ

    ಸಾರ್ವಜನಿಕರು ಸಂಬಂಧಿಸಿದ ಮತಗಟ್ಟೆಗಳಲ್ಲಿ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬೇಕು. ಪಟ್ಟಿಯಲ್ಲಿ ಯಾವುದೇ ನ್ಯೂನತೆಗಳು ಕಂಡು ಬಂದಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ಲೈನ್ https://voters.eci.gov.in ಅಥವಾ Voter Helpline App(VHA) ಮೂಲಕ ಅಥವಾ ಆಫ್ಲೈನ್ ಮೂಲಕ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ(BLO)ಗಳಿಗೆ ಸಲ್ಲಿಸಲು ಅವಕಾಶವಿದೆ.

    ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 10,36,724 ಪುರುಷ, 10,57,981 ಮಹಿಳೆಯರು ಹಾಗೂ 57 ತೃತೀಯ ಲಿಂಗಿ ಮತದಾರರು ಸೇರಿದಂತೆ ಒಟ್ಟು 20,94,762 ಮತದಾರರಿದ್ದು, 18-19 ವರ್ಷದೊಳಗಿನ 15,754 ಪುರುಷರು, 14,543 ಮಹಿಳೆಯರು ಹಾಗೂ 4 ತೃತೀಯ ಲಿಂಗಿ ಮತದಾರರು ಸೇರಿದಂತೆ ಒಟ್ಟು 30,301 ಯುವ ಮತದಾರರು ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ನಮೂನೆ–7ರಂತೆ ಮತದಾರರ ಪಟ್ಟಿಯಿಂದ 7,248 ಮತದಾರರನ್ನು ಕೈಬಿಡಲಾಗಿದ್ದು, ಈ ಪೈಕಿ 162 ಮರಣ ಹೊಂದಿದ, 25 ಗೈರು, 63 ಈಗಾಗಲೇ ನೋಂದಣೆಯಾದ, 4777 ಸ್ಥಳಾಂತರಗೊಂಡ ಹಾಗೂ 2221 ಇತರೆ ಸೇರಿದಂತೆ ಒಟ್ಟು 7,248 ಮತದಾರರನ್ನು ಕೈಬಿಡಲಾಗಿದೆ ಎಂದು ಮಾಹಿತಿ ನೀಡಿದರು.

    ಸಭೆಯಲ್ಲಿ ಮಾನ್ಯತೆ ಪಡೆದ ರಾಷ್ಟ್ರ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಗೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟಿಯ ಹಾರ್ಡ್ ಕಾಪಿ ಮತ್ತು ಸಾಫ್ಟ್ ಕಾಪಿಯನ್ನು ವಿತರಿಸಲಾಯಿತು. ಸಭೆಯಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾ ಶಾಲೆಯ ನಾಗಭೂಷಣ್ ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ಎಸ್.ಎಸ್. ವೃತ್ತದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ವೀಕ್ಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 28, 2026

    ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ

    October 28, 2026

    Leave A Reply Cancel Reply

    Our Picks

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ತುಮಕೂರು : ನಗರದ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತಕ್ಕೆ ‘ತುಮಕೂರು ಸ್ಕ್ವೇರ್’ ಎಂದು ಮರುನಾಮಕರಣ ಮಾಡುವ ಜಿಲ್ಲಾಡಳಿತದ ನಿರ್ಧಾರದ ಕುರಿತು…

    ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ

    October 28, 2026

    ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!

    October 28, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.