ತುಮಕೂರು: ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ನಡೆದಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಪ್ರಕ್ರಿಯೆಯಲ್ಲಿ ಮನೆಮನೆಗೆ ಹೋಗಿ ಮಾಹಿತಿ ಪಡೆಯಬೇಕಾದ ಬಿಎಲ್ ಒಗಳು, ಚುನಾವಣಾಆಯೋಗದ ಸೂಚನೆ ಉಲ್ಲಂಘಿಸಿ ಕಲ್ಯಾಣ ಮಂಟಪ, ಮಸೀದಿಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಹಿರಿಯಉಪಾಧ್ಯಕ್ಷ ಟಿ.ಆರ್.ಸದಾಶಿವಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಿಎಲ್ ಒಗಳು ಯಾರದೋ ಒತ್ತಡಕ್ಕೆ ಮಣಿದು ಮಸೀದಿ, ಕಲ್ಯಾಣ ಮಂಟಪ, ಸಮುದಾಯಭವನಗಳಲ್ಲಿ ಎಸ್ ಐಆರ್ ಪ್ರಕ್ರಿಯೆ ನಡೆಸುತ್ತಿರುವುದನ್ನು ಬಿಜೆಪಿ ವಿರೋಧಿಸುತ್ತದೆ. ಈ ರೀತಿ ಸಾಮೂಹಿಕವಾಗಿ ಮಾಹಿತಿ ಸಂಗ್ರಹಿಸುವುದರಿಂದ ತಪ್ಪು ಮಾಹಿತಿ ಸಂಗ್ರಹವಾಗಬಹುದು ಅಥವಾ ಬಿಎಲ್ ಒಗಳನ್ನು ಪ್ರಭಾವಿಗಳು ತಪ್ಪುದಾರಿಗೆಳೆಯುವ ಅನುಮಾನಗಳಿವೆ. ಇದರಿಂದ ಎಸ್‌ಐಆರ್ ಆಶಯಗಳಿಗೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ.
ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹೆಚ್ಚೆತ್ತುಕೊಂಡು ಇಂತಹ ಕಾರ್ಯಗಳಿಗೆ ಕಡಿವಾಣ ಹಾಕಬೇಕು. ಬಿಎಲ್ ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿಯೇ ಕುಟುಂಬದವರಿಂದ ನೇರವಾಗಿ ಮಾಹಿತಿ ಸಂಗ್ರಹಿಸಬೇಕು ಎಂದು ಕಠಿಣ ಸೂಚನೆ ನೀಡಬೇಕು ಎಂದು ಟಿ.ಆರ್.ಸದಾಶಿವಯ್ಯ ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


