ಸಿರಾ: ತಾಲೂಕು ಗೊಲ್ಲ ನೌಕರರ ಬಳಗದ ವತಿಯಿಂದ ಗೊಲ್ಲ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ದಿನಾಂಕ ಜುಲೈ 19 ರಂದು ಸಿರಾ ನಗರದ ಪಪ್ಪಿ ವೈಟ್ ಪ್ಯಾಲೇಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
2025–26 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇಕಡ 80ಕ್ಕಿಂತ ಹೆಚ್ಚು ಅಂಕ ಪಡೆದ ತಾಲೂಕಿನ ಗೊಲ್ಲ ಸಮುದಾಯದ ವಿದ್ಯಾರ್ಥಿಗಳು ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ವಿದ್ಯಾರ್ಥಿ ಪುರಸ್ಕಾರಕ್ಕಾಗಿ ಬರೆದ ಅರ್ಜಿ, ಅಂಕಪಟ್ಟಿ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್, ಜಾತಿ ಪ್ರಮಾಣ ಪತ್ರ ಹಾಗೂ ವಿದ್ಯಾರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋವನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ: 86184 75585 ಹಾಗೂ ಮೊ: 97406 53461 ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಜುಲೈ 10 ಆಗಿದ್ದು, ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




