ತುಮಕೂರು: ಜಿಲ್ಲೆಯ ಸಿರಾ ತಾಲೂಕು ಚಿಕ್ಕನಹಳ್ಳಿಯಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದಾಖಲಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ.
ಸಾಮಾನ್ಯ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಕನಿಷ್ಠ ಶೇ. 50 ಅಂಕ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ–1/ವಿಕಲಚೇತನ ವಿದ್ಯಾರ್ಥಿಗಳು ಕನಿಷ್ಠ ಶೇ. 45ರಷ್ಟು ಅಂಕ ಗಳಿಸಿರಬೇಕು.
ವಿದ್ಯಾರ್ಥಿಗಳಿಗೆ ಡಿ.ಎಲ್.ಇಡಿ ತರಬೇತಿ ಪಡೆದ ನಂತರ 1 ರಿಂದ 5ನೇ ತರಗತಿ ಹಾಗೂ ಪದವೀಧರ ವಿದ್ಯಾರ್ಥಿಗಳಿಗೆ 6 ರಿಂದ 8ನೇ ತರಗತಿವರೆಗೆ ಬೋಧನೆ ಮಾಡಲು ಅವಕಾಶವಿರುತ್ತದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾವಕಾಶವಿದ್ದು, ಸಾಮಾನ್ಯ ವಿದ್ಯಾರ್ಥಿಗಳಿಗೆ 3,500 ರೂ.ಗಳ ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿದ್ಯಾರ್ಥಿವೇತನ ನೀಡಲಾಗುವುದು. ದಾಖಲಾತಿ ಪಡೆಯಲು ಮೇ 29 ಕಡೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂ. 9448842574, 9741507942, 9480250487ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಪ್ರಾಂಶುಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


